ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್(ಸಂಗ್ರಹ ಚಿತ್ರ) 
ರಾಜ್ಯ

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿಧನ

ಕರಾವಳಿ ಭಾಗದಲ್ಲಿ ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿ ಹೆಸರು ಮಾಡಿದ್ದ ಮನೋಹರ ಪ್ರಸಾದ್

ಮಂಗಳೂರು: ಕರಾವಳಿ ಭಾಗದ ಕನ್ನಡದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (64 ವ) ಮಂಗಳೂರಿನಲ್ಲಿ ಶುಕ್ರವಾರ ನಸುಕಿನ ಜಾವ ನಿಧನ ಹೊಂದಿದ್ದಾರೆ.

ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿ ಹೆಸರು ಮಾಡಿದ್ದ ಮನೋಹರ ಪ್ರಸಾದ್ ಸ್ವತಃ ಉತ್ತಮ ಕತೆಗಾರ ಹಾಗೂ ಕವಿ ಕೂಡ ಆಗಿದ್ದರು. 'ಉದಯವಾಣಿ' ಪತ್ರಿಕೆಯ ಮಂಗಳೂರು ಬ್ಯೂರೋದ ಮುಖ್ಯಸ್ಥರಾಗಿದ್ದ ಮನೋಹರ ಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ಅರಸಿ ಬಂದಿದ್ದವು.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ