ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್ 
ರಾಜ್ಯ

ಬೆಂಗಳೂರಿನಲ್ಲಿ ನೀರಿನ ಕೊರತೆ: ಖಾಸಗಿ ನೀರಿನ ಟ್ಯಾಂಕರ್‌ಗಳನ್ನು ವಶಕ್ಕೆ ಪಡೆಯಲು ಸರ್ಕಾರ ಚಿಂತನೆ!

Lingaraj Badiger

ಬೆಂಗಳೂರು: ತೀವ್ರ ನೀರಿನ ಕೊರತೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಖಾಸಗಿ ನೀರಿನ ಟ್ಯಾಂಕರ್‌ಗಳನ್ನು ರಾಜ್ಯ ಸರ್ಕಾರ ವಶಕ್ಕೆ ಪಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆಶಿ, ಬೆಂಗಳೂರಿನಲ್ಲಿ ನೀರಿನ ಅಭಾವ ಉಂಟಾಗಿದೆ ಎಂದರು.

ಬಿಡಬ್ಲ್ಯೂಎಸ್‌ಎಸ್‌ಬಿ(ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ) ಮತ್ತು ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಅಧಿಕಾರಿಗಳು ಈ ಸಮಸ್ಯೆಯನ್ನು ನಿವಾರಿಸಲು ಪ್ರತಿದಿನ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಡಿಸಿಎಂ ತಿಳಿಸಿದ್ದಾರೆ.

"ಬೆಂಗಳೂರಿನಲ್ಲಿ ನೀರಿನ ಕೊರತೆಯನ್ನು ಖಾಸಗಿ ಟ್ಯಾಂಕರ್‌ಗಳು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಹೀಗಾಗಿ ಎಲ್ಲಾ ನೀರಿನ ಟ್ಯಾಂಕರ್‌ಗಳನ್ನು ಮಾರ್ಚ್ 7 ರೊಳಗೆ ನೋಂದಣಿ ಮಾಡುವಂತೆ ನಾವು ಸೂಚನೆ ನೀಡಿದ್ದೇವೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಚರ್ಚಿಸಲು ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆದಿದ್ದೇವೆ. 10 ಕೋಟಿ ರೂ. ಅನುದಾನ ಸಹ ನೀಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು’’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

SCROLL FOR NEXT