arrest (representational image) 
ರಾಜ್ಯ

ಚಿತ್ರದುರ್ಗ: ಜಾಮೀನು ಪಡೆದು ನಾಪತ್ತೆಯಾಗಿದ್ದ ಆರೋಪಿ ಸೆರೆಹಿಡಿಯಲು ನೆರವಾದ ಭಿಕ್ಷುಕರ ಪುನರ್ವಸತಿ ಕೇಂದ್ರ!

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು ಇತ್ತೀಚೆಗೆ ಗೋಣೂರಿನ ಭಿಕ್ಷುಕರ ಪುನರ್ವಸತಿ ಕೇಂದ್ರದ ಅಧಿಕಾರಿಗಳು ಬಂಧಿಸಿದ್ದರು.

ಚಿತ್ರದುರ್ಗ: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು ಇತ್ತೀಚೆಗೆ ಗೋಣೂರಿನ ಭಿಕ್ಷುಕರ ಪುನರ್ವಸತಿ ಕೇಂದ್ರದ ಅಧಿಕಾರಿಗಳು ಬಂಧಿಸಿದ್ದರು, ನಂತರ ವಿಚಾರಣೆಗೊಳಪಡಿಸಿದಾಗ ಆತ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಪೈಲಾರ ವಂಶಿ (22) ಎಂಬಾತ ಹೆದ್ದಾರಿಯಲ್ಲಿ ಭಿಕ್ಷೆ ಬೇಡುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಪುನರ್ವಸತಿ ಕೇಂದ್ರದ ಸೂಪರಿಂಟೆಂಡೆಂಟ್ ಆತನನ್ನು ಪ್ರಶ್ನಿಸಿದಾಗ, ತಾನು ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದು, ಕೆಲಸಕ್ಕೆ ಹೋಗುತ್ತಿರುವುದಾಗಿ ಹೇಳಿದ್ದ.

ನಂತರ ಆತನನ್ನು ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ದರು . ವಿಚಾರಣೆ ಮಾಡುವ ವೇಳೆ ವಂಶಿ ತೆಲಂಗಾಣದಲ್ಲಿ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಮೈಲಾರ್‌ದೇವಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆತನ ವಿರುದ್ಧ ಪ್ರಕರಣಗಳಿವೆ ಎಂದು ಬಹಿರಂಗಪಡಿಸಿದ್ದಾನೆ.

ವಂಶಿ ನೀಡಿದ ವಿವರಗಳೊಂದಿಗೆ ಅಧಿಕಾರಿಗಳು ತೆಲಂಗಾಣ ಪೊಲೀಸರನ್ನು ಸಂಪರ್ಕಿಸಿದರು. ಈ ವೇಳೆ ಆರೋಪಿಯನ್ನು ಬಿಡುಗಡೆ ಮಾಡದಂತೆ ಪೊಲೀಸ್ ಅಧಿಕಾರಿಗಳು ಪುನರ್ವಸತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಂಶಿ ಅತ್ಯಾಚಾರ ಮತ್ತು ಕೊಲೆ ಯತ್ನದಂತಹ ವಿವಿಧ ಅಪರಾಧಗಳಿಗಾಗಿ 18 ತಿಂಗಳ ಕಾಲ ಜೈಲಿನಲ್ಲಿದ್ದನು. ಎರಡು ವರ್ಷಗಳ ಹಿಂದೆ ತನ್ನ ತಾತನ ಸಹಾಯದಿಂದ ಜಾಮೀನು ಪಡೆದಿದ್ದನು, ಜಾಮೀನು ಪಡೆದ ಆತ ತಲೆಮರೆಸಿಕೊಂಡಿದ್ದಾನೆ.

ಆತ ಮೊದಲು ಕೋಲಾರದ ಬಾಗೇಪಲ್ಲಿಗೆ ಆಗಮಿಸಿ ತೃತೀಯಲಿಂಗಿಗಳ ಗುಂಪನ್ನು ಸೇರಿಕೊಂಡು ಅವರೊಂದಿಗೆ ಭಿಕ್ಷೆ ಬೇಡಲು ಪ್ರಾರಂಭಿಸಿದ್ದ. ದಿನಕ್ಕೆ 3,000-4,000 ಸಂಗ್ರಹಿಸಿ ಗ್ರೂಪ್ ಲೀಡರ್ ಗೆ ನೀಡುತ್ತಿದ್ದ.

ಗುಂಪಿನ ನಾಯಕನು ವಂಶಿ ಹಿಂದಿನ ಚರಿತ್ರೆ ತಿಳಿದಾಗ, ಆತನನ್ನು ಹೊರಹಾಕಿದಳು. ಸ್ವಲ್ಪ ಸಮಯ ಅಲ್ಲಿ ಇಲ್ಲಿ ಅಲೆದಾಡಿ ನಂತರ ಚಿತ್ರದುರ್ಗಕ್ಕೆ ಬಂದ. ತೆಲಂಗಾಣ ಪೊಲೀಸರು ಆರೋಪಿಯನ್ನು ಮಾರ್ಚ್ 13 ರಂದು ತನ್ನ ಮುಂದೆ ಹಾಜರುಪಡಿಸಲು ಎಲ್‌ಬಿ ನಗರದಿಂದ 13 ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಂದ ವಾರಂಟ್ ಪಡೆದಿದ್ದಾರೆ.

ಚಿತ್ರದುರ್ಗಕ್ಕೆ ಬಂದು ವಂಶಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ತೆಲಂಗಾಣ ಪೊಲೀಸರು ಆರೋಪಿಯನ್ನು ಬಂಧಿಸಲು ಸಹಾಯ ಮಾಡಿದ್ದಕ್ಕಾಗಿ ಭಿಕ್ಷುಕರ ಪುನರ್ವಸತಿ ಕೇಂದ್ರದ ಮಹದೇವಯ್ಯ ಅವರಿಗೆ ಧನ್ಯವಾದ ಅರ್ಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT