ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ: ವ್ಯಕ್ತಿಯ ಚಹರೆ ಸಿಕ್ಕಿದೆ, ಆದಷ್ಟು ಬೇಗ ಆರೋಪಿಯ ಬಂಧನ; ಸಿಎಂ ವಿಶ್ವಾಸ

ಪಾಕಿಸ್ತಾನ್​ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ನೂ ಎಫ್ಎಸ್ಎಲ್ ವರದಿ ಬಂದಿಲ್ಲ

ಮೈಸೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಚಹರೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಪತ್ತೆಯಾಗಿದ್ದು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದ್ದಾರೆ.

ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಪಿ ಮಾಸ್ಕ್​, ಟೋಪಿ​ ಹಾಕಿಕೊಂಡು ಬಂದು ರಾಮೇಶ್ವರ ಕೆಫೆಯೊಳಗೆ ಬಂದು ತಿಂಡಿ ತಿಂದಿದ್ದಾನೆ. ಬಸ್​ನಿಂದ ಇಳಿದು ಹೋಟೆಲ್​ಗೆ ಹೋಗಿದ್ದಾನೆ. ಬಸ್​ನಿಂದ ಇಳಿದು ಹೋಗಿರುವ ದೃಶ್ಯಾವಳಿಗಳು ಪತ್ತೆಯಾಗಿವೆ. ಆರೋಪಿ ಕಪ್ಪು ಬಣ್ಣದ ಮಾಸ್ಕ್​ ಹಾಕಿಕೊಂಡು ಬಂದಿದ್ದನು. ಟೋಪಿ ಹಾಕಿಕೊಂಡು ಬಂದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್​​ನಲ್ಲಿ ತಿಂಡಿಯ ಟೋಕನ್​ ತೆಗೆದುಕೊಂಡಿದ್ದಾನೆ. ನಂತರ ಹೋಟೆಲ್​​ನಲ್ಲಿ ಕುಳಿತು ಟೈಮರ್​ ಫಿಕ್ಸ್​ ಮಾಡಿದ್ದಾನೆ. ಟೈಮರ್ ಫಿಕ್ಸ್​ ಮಾಡಿ ಇಟ್ಟು ಹೋಟೆಲ್​​ನಿಂದ ಹೊರಹೋಗಿದ್ದಾನೆ​. ಬಳಿಕ ಬ್ಲಾಸ್ಟ್​ ಆಗಿದೆ ಎಂದರು.

ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಇದು ಓರ್ವ ವ್ಯಕ್ತಿಯ ಕೃತ್ಯವಾ ಅಥವಾ ಸಂಘಟನೆಯ ಕೃತ್ಯವೇ ಎಂದು ಇನ್ನೂ ಗೊತ್ತಾಗಿಲ್ಲ. ಭಯೋತ್ಪಾದಕ ಕೃತ್ಯನಾ ಎಂಬುದು ಕೂಡ ಸ್ಪಷ್ಟವಾಗಿಲ್ಲ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿಸಿದರು.

2022 ರ ಮಂಗಳೂರು ಪ್ರೆಶರ್ ಕುಕ್ಕರ್ ಸ್ಫೋಟ ಮತ್ತು ಶುಕ್ರವಾರದ ಘಟನೆಯ ನಡುವೆ ಸಾಮ್ಯತೆಗಳನ್ನು ಸೂಚಿಸುವ ಕೆಲವು ವರದಿಗಳ ಕುರಿತು ಕೇಳಲಾದ ಪ್ರಶ್ನೆಗೆ ಸಿದ್ದರಾಮಯ್ಯ ಅವರು ತೀವ್ರವಾದ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಎಫ್ಎಸ್ಎಲ್ ವರದಿ ಬಂದಿಲ್ಲ: ವಿಧಾನಸೌಧದಲ್ಲಿ ಪಾಕಿಸ್ತಾನ್​ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ನೂ ಎಫ್ಎಸ್ಎಲ್ ವರದಿ ಬಂದಿಲ್ಲ. ತಪ್ಪು ಸಾಬೀತಾದರೆ ನಾವು ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ವರದಿ ಬರದೆ ಆರೋಪಗಳಿಗೆ ಏನೂ ಉತ್ತರ ಕೊಡಲಿ ಎಂದು ಕೇಳಿದರು.

ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತ ತುಷ್ಟೀಕರಣದಿಂದ ಇಂತಹ ಘಟನೆಗಳು ನಡೆಯುತ್ತವೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಿಎಂ, ಬಿಜೆಪಿ ಆಡಳಿತ ಕಾಲದಲ್ಲಿ ಆದ ಬಾಂಬ್ ಬ್ಲಾಸ್ಟ್​​ಗಳಿಗೆ ಏನು ಕಾರಣ? ಅದು ಅಲ್ಪಸಂಖ್ಯಾತರ ತುಷ್ಟೀಕರಣವಾ? ಬಿಜೆಪಿ ರಾಜಕೀಯಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದೆ. ಅಲ್ಪಸಂಖ್ಯಾತರಿಗೂ ಇದಕ್ಕೂ ಏನು ಸಂಬಂಧ? ಬಿಜೆಪಿ ಇದನ್ನು ರಾಜಕೀಯ ಮಾಡುತ್ತಿದೆ ಅಷ್ಟೆ. ಈ ವಿಚಾರದಲ್ಲಿ ರಾಜಕೀಯ ಯಾರು ಮಾಡಬಾರದು, ನಾಗರಿಕರ ರಕ್ಷಣೆ ವಿಚಾರವಿದು ಎಂದು ಕೇಳಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT