ಕಟ್ಟಡ ನಿರ್ಮಾಣ ವಿರೋಧಿಸಿ ನಡಿಗೆದಾರರ ಸಂಘದಿಂದ ಪ್ರತಿಭಟನೆ
ಕಟ್ಟಡ ನಿರ್ಮಾಣ ವಿರೋಧಿಸಿ ನಡಿಗೆದಾರರ ಸಂಘದಿಂದ ಪ್ರತಿಭಟನೆ 
ರಾಜ್ಯ

ಕಬ್ಬನ್ ಪಾರ್ಕ್ ನಲ್ಲಿ 10 ಅಂತಸ್ತಿನ ಕಟ್ಟಡ ನಿರ್ಮಾಣ ವಿರೋಧಿಸಿ ನಡಿಗೆದಾರರ ಸಂಘದಿಂದ ಪ್ರತಿಭಟನೆ

Srinivasamurthy VN

ಬೆಂಗಳೂರು: ಕಬ್ಬನ್ ಪಾರ್ಕ್ ಆವರಣದಲ್ಲಿ 10 ಅಂತಸ್ತಿನ ಕಟ್ಟಡ ನಿರ್ಮಾಣ ವಿರೋಧಿಸಿ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ (ನಡಿಗೆದಾರರ ಸಂಘ) ಮೂರನೇ ಬಾರಿಗೆ ಪ್ರತಿಭಟನೆ ನಡೆಸಿತು.

ಬೆಂಗಳೂರಿನ ಹೃದಯ ಭಾಗದಲ್ಲಿರುವ ಹಸಿರು ಪ್ರದೇಶವಾದ ಕಬ್ಬನ್ ಪಾರ್ಕ್‌ನಲ್ಲಿ ಹೈಕೋರ್ಟ್ ಕಟ್ಟಡ ನಿರ್ಮಿಸುವ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಸಾರ್ವಜನಿಕರಿಂದ ಮತ್ತು ವಿಪಕ್ಷ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಗಮನಾರ್ಹ ವಿರೋಧವನ್ನು ಎದುರಿಸುತ್ತಿದೆ.

ಲೋಕೋಪಯೋಗಿ ಇಲಾಖೆ (PWD) ಇತ್ತೀಚೆಗೆ ಉದ್ಯಾನದೊಳಗೆ ಹೈಕೋರ್ಟ್ ಕಟ್ಟಡ ನಿರ್ಮಿಸುವ ಹಿಂದಿನ ಯೋಜನೆಯನ್ನು ಮತ್ತೆ ಕಾರ್ಯರೂಪಕ್ಕೆ ತಂದಿದ್ದು, ಕಬ್ಬನ್ ಪಾರ್ಕ್‌ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಮಗಾರಿ ವಿರೋಧಿಸಿ ನಡಿಗೆದಾರರ ಸಂಘ ಸರಣಿ ಪ್ರತಿಭಟನೆ ನಡೆಸಿದೆ. ಇಂದು ನಡೆದ ಪ್ರತಿಭಟನೆ ಮೂರನೇ ಪ್ರತಿಭಟನೆಯಾಗಿದೆ.

ಇತ್ತೀಚೆಗಷ್ಟೇ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಸದಸ್ಯರು ಹೈಕೋರ್ಟ್ ಕಟ್ಟಡ ನಿರ್ಮಾಣದ ನಿರ್ಧಾರವನ್ನು ಅಧಿಕೃತವಾಗಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ಮೌನ ಪ್ರತಿಭಟನೆ ನಡೆಸಿದ್ದರು. ರಾಜ್ಯ ಕೇಂದ್ರ ಗ್ರಂಥಾಲಯದ ಅವರಣದಲ್ಲಿ ಭಿತ್ತಿ ಫಲಕಗಳನ್ನು ಹಿಡಿದು ಜಮಾಯಿಸಿದ್ದರು. ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಎಸ್ .ಉಮೇಶ್ ಕುಮಾರ್ , ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತಪಡಿಸಿ, ಈಗಾಗಲೇ ನಗರಕ್ಕೆ ಹೊರೆಯಾಗಿರುವ ಉದ್ಯಾನದ ಜಾಗ ಅತಿಕ್ರಮಣ ಹಾಗೂ ಸಂಚಾರ ದಟ್ಟಣೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಅದೇ ರೀತಿ ನೂರಾರು ಬೆಂಗಳೂರಿಗರು ಉದ್ಯಾನವನದಲ್ಲಿ ಜಮಾಯಿಸಿ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಅಸಮ್ಮತಿ ವ್ಯಕ್ತಪಡಿಸಿದರು. ಉದ್ಯಾನವನದೊಳಗೆ 10 ಅಂತಸ್ತಿನ ಕಟ್ಟಡವನ್ನು ನಿರ್ಮಿಸುವುದರಿಂದ ಅದರ ಹಸಿರು ಕಡಿಮೆಯಾಗುವುದಲ್ಲದೆ ಹಸಿರನ್ನು ನಂಬಿ ಇರುವ ಜೀವ ಸಂಕುಲಕ್ಕೆ ಭಂಗ ಉಂಟಾಗುತ್ತದೆ ಎಂದು ಪ್ರತಿಭಟನಾಕಾರರು ವಾದಿಸಿದ್ದಾರೆ.

SCROLL FOR NEXT