ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗುತ್ತಿದ್ದ ಮಗಳ ರಕ್ಷಣೆಗೆ ಮುಂದಾದ ದಂಪತಿ ಸೇರಿ ಮೂವರ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು 70 ವರ್ಷದ ಮರಿಯಪ್ಪ, 60 ವರ್ಷದ ಮುನಿಯಮ್ಮ ಮತ್ತು 40 ವರ್ಷದ ಭಾರತಿ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಊಟ ಮಾಡಿ ಕೈ ತೊಳೆಯಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. ಭಾರತಿ ಕೈ ತೊಳೆಯಲು ಹೋಗಿದ್ದಾಗ ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ಹೆತ್ತವರು ಆಕೆಯನ್ನು ರಕ್ಷಿಸಲು ಮುಂದಾದಗ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹೊಸಕೋಟೆ ಪೊಲೀಸರು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT