ಆರ್. ಅಶೋಕ್ 
ರಾಜ್ಯ

ಅಲ್ಪಸಂಖ್ಯಾತರ ಮೇಲಿನ ಪ್ರಕರಣ ಮುಚ್ಚಿ ಹಾಕಲು ಪೊಲೀಸರಿಗೆ ಸೂಚನೆ: ಆರ್. ಅಶೋಕ್

ಅಲ್ಪಸಂಖ್ಯಾತರ ಮೇಲಿನ ಪ್ರಕರಣಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಸರ್ಕಾರ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೋಮವಾರ ಆರೋಪಿಸಿದ್ದಾರೆ.

ಬೆಂಗಳೂರು: ಅಲ್ಪಸಂಖ್ಯಾತರ ಮೇಲಿನ ಪ್ರಕರಣಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಸರ್ಕಾರ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೋಮವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಮೇಲಿನ ಪ್ರಕರಣ ಮುಚ್ಚಿ ಹಾಕಲು ಮತ್ತು ಬಹುಸಂಖ್ಯಾತ ಸಮುದಾಯದವರ ವಿರುದ್ಧ ಪ್ರಕರಣಗಳು ದಾಖಲಾದಾಗ ತಕ್ಷಣ ಕ್ರಮ ಕೈಗೊಳ್ಳುವಂತೆ ಸರಕಾರದಿಂದ ಸ್ಪಷ್ಟ ಸೂಚನೆ ಇದೆ. ಕರ್ನಾಟಕದ ಪ್ರಜೆಯಾಗಿ ಈ ಬೆಳವಣಿಗೆಗಳಿಂದ ದುಃಖಿತನಾಗಿದ್ದೇನೆ. ಎರಡೂ ಪ್ರಕರಣಗಳಲ್ಲಿ (ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗು ಮತ್ತು (ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ) ಆರೋಪಗಳು ಸಾಬೀತಾದರೆ, ಅವರು ಸರ್ಕಾರವನ್ನು ವಿಸರ್ಜಿಸುತ್ತಾರೆಯೇ? ಎಂದು ಕೇಳಿದರು.

“ಎರಡೂ ಪ್ರಕರಣಗಳಲ್ಲಿ ಭಯೋತ್ಪಾದಕರ ಸಂಪರ್ಕ ದೃಢಪಟ್ಟರೆ ಸರ್ಕಾರದಲ್ಲಿ ಎಲ್ಲರೂ ರಾಜೀನಾಮೆ ಸಲ್ಲಿಸುತ್ತಾರೆಯೇ? ವ್ಯಾಪಾರದ ಪೈಪೋಟಿಯ ಪರಿಣಾಮವಾಗಿ ಕೆಫೆ ಬಾಂಬ್ ಸ್ಫೋಟ ನಡೆದಿದೆ ಎಂದು ಯಾರು ಮಾತನಾಡಿದ್ದಾರೆ? ಈ ಹೇಳಿಕೆಗಳು ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಮುಂದುವರಿಕೆಯನ್ನು ಖಾತ್ರಿಪಡಿಸುತ್ತವೆ. ಗೃಹ ಸಚಿವರು ಒತ್ತಡದಲ್ಲಿದ್ದಾರೆ. ನಾನು ಸಹ ಗೃಹ ಸಚಿವನಾಗಿದ್ದೆ. ಸಲ್ಲಿಕೆ ದಿನಾಂಕವನ್ನು ವರದಿಯಲ್ಲಿ ನಮೂದಿಸಲಾಗುವುದು. ಗೃಹ ಸಚಿವರು ಈ ವಿವಾದವನ್ನು ಹೇಗೋ ನಿರ್ವಹಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರಕ್ಕೆ ನೊಬೆಲ್ ಪ್ರಶಸ್ತಿ ನೀಡಬೇಕು, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡದಲ್ಲಿ ಸಿಲುಕಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರವು "ಸತ್ಯಗಳನ್ನು ಮರೆಮಾಚಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು. ಖಾಸಗಿ ವರದಿಯಲ್ಲಿ ಪಾಕ್ ಪರ ಘೋಷಣೆಗಳು ಕೇಳಿಬರುತ್ತಿರುವುದು ಸಾಬೀತಾಗಿದೆ. ಸರ್ಕಾರಕ್ಕೆ ಅಧಿಕೃತ ಎಫ್‌ಎಸ್‌ಎಲ್ ವರದಿ ಕೂಡ ಬಂದಿದೆ. ಯಾರನ್ನಾದರೂ ರಕ್ಷಿಸಲು ರಾಜ್ಯ ಸರ್ಕಾರ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆಯೇ ಎಂದು ಅಶೋಕ್ ಪ್ರಶ್ನಿಸಿದರು.

ವಿಧಾನಸೌಧದ ಆವರಣದಲ್ಲಿ ಇಂತಹ ಯಾವುದೇ ಘಟನೆ ನಡೆದಿಲ್ಲ ಎಂಬ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ವ್ಯಾಪಾರ ವೈಷಮ್ಯದಿಂದಲೇ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಮಂಗಳೂರು ಕುಕ್ಕರ್ ಸ್ಫೋಟದ ಸಂಚುಕೋರನನ್ನು ನಿರಪರಾಧಿ ಎಂದು ಬಣ್ಣಿಸಿದ್ದಾರೆ. ಎಫ್‌ಎಸ್‌ಎಲ್ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗ ಮಾಡಿಲ್ಲ. ಯಾರೊಬ್ಬರ ಮೇಲೆ ಆರೋಪ ಹೊರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅಶೋಕ್ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನೀವು ಸತ್ಯದ ಮೇಲೆ ಪ್ರಮಾಣ ಮಾಡಿದ್ದೀರಿ, ಅಧಿಕಾರ ಸ್ವೀಕರಿಸಿದ ನಂತರ ಸತ್ಯವನ್ನು ತುಳಿದರೆ ಅದು ನಿಮ್ಮ ಘನತೆಗೆ ತಕ್ಕುದಲ್ಲ. ಪಕ್ಷವು ದೇಶಕ್ಕಿಂತ ಮೇಲುಗೈ ಸಾಧಿಸಿದೆಯೇ? ರಾಷ್ಟ್ರೀಯ ಹಿತಾಸಕ್ತಿಗಿಂತ ಮತ ಬ್ಯಾಂಕ್ ರಾಜಕಾರಣ ದೊಡ್ಡದೇ? ರಾಷ್ಟ್ರವನ್ನು ಉಳಿಸಿದರೆ ನಿಮ್ಮ ಪಕ್ಷ, ಮತ, ಅಧಿಕಾರ ಉಳಿಯುತ್ತದೆ. ನಿಮ್ಮಲ್ಲಿ ದೇಶಪ್ರೇಮವಿದ್ದರೆ ಸಮಯ ವ್ಯರ್ಥ ಮಾಡದೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣದ ಎಫ್‌ಎಸ್‌ಎಲ್ ವರದಿಯನ್ನು ಸಾರ್ವಜನಿಕವಾಗಿ ಪ್ರಕಟಿಸಿ ಎಂದು ಅಶೋಕ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT