ಎಂಬಿ ಪಾಟೀಲ್ 
ರಾಜ್ಯ

ತುಮಕೂರು- ದಾವಣಗೆರೆ, ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ರೂ. 93.32 ಕೋಟಿ ಬಿಡುಗಡೆ- ಎಂಬಿ ಪಾಟೀಲ

ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ತುಮಕೂರು, ದಾವಣಗೆರೆ ಮತ್ತು ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ಕ್ರಮವಾಗಿ ರೂ. 50 ಮತ್ತು 43.32 ಕೋಟಿ ಸೇರಿದಂತೆ ಒಟ್ಟು ರೂ. 93.32 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಸೋಮವಾರ ತಿಳಿಸಿದ್ದಾರೆ.

ಬೆಂಗಳೂರು: ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ತುಮಕೂರು, ದಾವಣಗೆರೆ ಮತ್ತು ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ಕ್ರಮವಾಗಿ ರೂ. 50 ಮತ್ತು 43.32 ಕೋಟಿ ಸೇರಿದಂತೆ ಒಟ್ಟು ರೂ. 93.32 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಸೋಮವಾರ ತಿಳಿಸಿದ್ದಾರೆ.

ಇದಲ್ಲದೇ, ಮೈಸೂರು- ರಾಯಚೂರು ವಿಮಾನ ನಿಲ್ದಾಣಗಳ ಕಾಮಗಾರಿಗಳಾಗಿ ಒಟ್ಟು ರೂ. 57.63 ಕೋಟಿ ಬಿಡುಗಡೆ ಮಾಡಲಾಗಿದೆ. ಈ ಪೈಕಿ ರೂ. 14. 62 ಕೋಟಿ ರಾಯಚೂರು ವಿಮಾನ ನಿಲ್ದಾಣದ ಕೆಲಸಗಳಿಗೆ ವಿನಿಯೋಗವಾಗಲಿದೆ. ಮೈಸೂರಿನಲ್ಲಿ ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಈ ಹಣ ಬಳಸಲಾಗುವುದು ಎಂದು ಅವರು ಹೇಳಿದ್ದಾರೆ.

ತುಮಕೂರನ್ನು ಮಧ್ಯಕರ್ನಾಟಕದೊಂದಿಗೆ ಬೆಸೆಯಲಿರುವ ತುಮಕೂರು- ದಾವಣಗೆರೆ ರೈಲ್ವೆ ಯೋಜನೆ ಅಭಿವೃದ್ಧಿ ದೃಷ್ಟಿಯಿಂದ ಮಹತ್ವದ್ದಾಗಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಭಾಗಗಳಿಗೆ ತ್ವರಿತಗತಿಯಲ್ಲಿ ರೈಲು ಸಂಚಾರ ಸಾಧ್ಯವಾಗಲಿದೆ. ಹಾಗೆಯೇ ಗದಗ, ವಾಡಿ ರೈಲು ಮಾರ್ಗದ ಅಭಿವೃದ್ಧಿಯಿಂದ ಹುಬ್ಬಳ್ಳಿ ಒಳಗೊಂಡಂತೆ ಕಿತ್ತೂರು ಕರ್ನಾಟಕ, ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಿಗೆ ಸುಲಭವಾಗಿ ತಲುಪಬಹುದಾಗಿದೆ. ಇದರಿಂದ ಈ ಜಿಲ್ಲೆಗಳಲ್ಲಿ ಮೂಲಸೌಕರ್ಯ ವೃದ್ಧಿ ಸೇರಿದಂತೆ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆಯಲಿದೆ ಎಂದು ಅವರು ವಿವರಿಸಿದ್ದಾರೆ.

ರೈಲು ಯೋಜನೆಗಳು ಮೂಲತ: ಕೇಂದ್ರ ಸರ್ಕಾರಕ್ಕೆ ಸೇರಿದ್ದರೂ ಕೆಲವು ಯೋಜನೆಗಳಿಗೆ ತಗಲುವ ಒಟ್ಟು ವೆಚ್ಚದಲ್ಲಿ ಶೇ.50 ರಷ್ಟನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಭೂಸ್ವಾಧೀ ಪ್ರಕ್ರಿಯೆ ಎರಡೂ ಯೋಜನೆಗಳ ವ್ಯಾಪ್ತಿಯಲ್ಲಿ ಅಂತಿಮ ಹಂತದಲ್ಲಿದೆ.ಇದು ಮುಗಿದ ಕೂಡಲೇ ಯೋಜನೆ ಕಾಮಗಾರಿಗಳು ಕ್ಷೀಪ್ರಗತಿಯಲ್ಲಿ ನಡೆಯಲಿವೆ ಎಂದು ಅವರು ಮಾಹಿತಿನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!