ಪಾಕ್ ಪರ ಘೋಷಣೆ ಪ್ರಕರಣ
ಪಾಕ್ ಪರ ಘೋಷಣೆ ಪ್ರಕರಣ 
ರಾಜ್ಯ

ಪಾಕ್ ಪರ ಘೋಷಣೆ ಪ್ರಕರಣ: ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Srinivasamurthy VN

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮೂವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ (Pro-Pak Slogan) ಕೂಗಿದ ಪ್ರಕರಣ ಸಂಬಂಧ ಬಂಧಿತ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ಆರೋಪಿಗಳಾದ ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ (Bengaluru) ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಮೂವರನ್ನೂ ಎರಡು ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದರು. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

ಏನಿದು ಪ್ರಕರಣ?

ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದರು.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ನಡೆಸಿದ್ದರು. ಈ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.

SCROLL FOR NEXT