ಕಾಡಸಿದ್ದೇಶ್ವರ ಮಠಕ್ಕೆ ಡಿಕೆಶಿ ಭೇಟಿ
ಕಾಡಸಿದ್ದೇಶ್ವರ ಮಠಕ್ಕೆ ಡಿಕೆಶಿ ಭೇಟಿ 
ರಾಜ್ಯ

ಅಕ್ರಮ ಹಣ ವರ್ಗಾವಣೆ: ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಡಿಕೆಶಿ ಭೇಟಿ

Srinivasamurthy VN

ತುಮಕೂರು: ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ತೀರ್ಪು ನೀಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ತುಮಕೂರು ಜಿಲ್ಲೆಯ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿಕೆ ಶಿವಕುಮಾರ್ ಅವರು, ಸುಪ್ರೀಂ ಕೋರ್ಟ್​​ನಲ್ಲಿ ರಿಲೀಪ್ ಸಿಕ್ಕಿದೆ ಎಂಬ ಮಾಹಿತಿ ಇದೆ. ನನ್ನ ಮೇಲೆ ಏನು ಕೇಸು ಇತ್ತೋ ಅದು ತಪ್ಪು ಅಂತ ತೀರ್ಪು ಬಂದಿದೆ. ಕೈಗೊಂಡಿರುವ ಕ್ರಮ ಎಲ್ಲವೂ ತಪ್ಪು ಎಂದು ಆದೇಶ ಆಗಿದೆ. ಕಷ್ಟದ ಜೀವನದ ಅತಿ ದೊಡ್ಡ ಸಂತೋಷದ ದಿನ ಇಂದು. ಅಜ್ಜಯ್ಯನ ದರ್ಶನಕ್ಕೆ ಹೋಗುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಅಲ್ಲದೆ ನಾನು ತಪ್ಪು ಮಾಡಿಲ್ಲ ಅಂತ ಕೋರ್ಟ್ ಹೇಳಿದೆ. ಈಗಲೂ ಸಿಬಿಐ ಏನೇನು ಮಾಡುತ್ತೆ ಅಂತ ಸದ್ಯದಲ್ಲೇ ಹೇಳುತ್ತೇನೆ. ಸುಪ್ರೀಂ ಕೋರ್ಟ್ ತೀರ್ಪಿಗೆ ಮೇಲ್ಮನವಿ ಹಾಕುವ ಪ್ರಯತ್ನ ನಡೆಸುತ್ತಿದ್ದಾರೆ. ನನಗೆ ಮಾರ್ಗ ಕಷ್ಟ ಅನ್ನಿಸಿಲ್ಲ. ಜೈಲಿಗೆ ಹೋದಾಗಲೂ ಆತ್ಮ ವಿಶ್ವಾಸದಲ್ಲಿ ಹೋಗಿದ್ದೆ.‌ ಎಷ್ಟು ತೊಂದರೆ ಕೊಡಲು ಯತ್ನಿಸುತ್ತಾರೆ ಅಷ್ಟು ಗಟ್ಟಿಯಾಗಿ ಬೆಳೆಯಲು ಶಕ್ತಿ ನೀಡುತ್ತದೆ. ನಮ್ಮ ಸುತ್ತಮುತ್ತ ಇರುವವರಿಗೆ ಕಿರುಕುಳ ನೀಡಲಾಗುತ್ತಿದೆ. ನನಗೆ ಯಾರೂ ವಿರೋಧಿಗಳಿಲ್ಲ ಎಂದು ಹೇಳಿದ್ದರು.

ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ

ಬಳಿಕ ಇಂದು ಸಂಜೆ ತುಮಕೂರು ಜಿಲ್ಲೆಯ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ದೇವರಿಗೆ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ ವರ್ಷ ನಾನು ಈ ಕಾಡಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ. ಈ ಬಾರಿ ಬಂದಿದ್ದೇನೆ. ನನ್ನ ಎಲ್ಲ ಕಷ್ಟ-ಸುಖದ ಸಂದರ್ಭದಲ್ಲಿ ಇಲ್ಲಿಗೆ ಬರುತ್ತೇನೆ. ಆದರೆ ಈ ಬಾರಿ ಸುಪ್ರೀಂ ಕೋರ್ಟ್ ತೀರ್ಪು ಬಂದಿರುವುದು ಸಂತಸ ತಂದಿದೆ ಎಂದರು.

ಡಿಕೆ ಶಿವಕುಮಾರ್ ವಿರುದ್ಧದ 2018ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಈ ಪ್ರಕರಣವನ್ನು ಇನ್ನು ಮುಂದೆ PMLA ಅಡಿ ತನಿಖೆ ಮಾಡಲಾಗುವುದಿಲ್ಲ. ಈ ಪ್ರಕರಣ 2017ರ ಅಗಸ್ಟ್​​ನಲ್ಲಿ ದೆಹಲಿಯಲ್ಲಿ ಪತ್ತೆಯಾದ ನಗದು ಹಣಕ್ಕೆ ಸಂಬಂಧಿಸಿದ್ದಾಗಿದೆ. ಈ ಕುರಿತು ಅಕ್ರಮ ಹಣ ವರ್ಗಾವಣೆ ಸೆಕ್ಷನ್‌ಗಳ ಅಡಿ ಇಡಿ ತನಿಖೆ ಆರಂಭಿಸಿತ್ತು. ಆದರೆ, ಇದೀಗ ಸುಪ್ರೀಂ ಕೋರ್ಟ್‌ನಿಂದ ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.

SCROLL FOR NEXT