ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ  
ರಾಜ್ಯ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆ: ನಾಗರಿಕರೇ ಎಚ್ಚರಿಕೆಯಿಂದಿರಿ...

Sumana Upadhyaya

ಬೆಂಗಳೂರು: ಈ ಬೇಸಿಗೆಯಲ್ಲಿ ಬೆಂಗಳೂರು ನಗರದ ಸರಾಸರಿ ತಾಪಮಾನ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿರುವುದರಿಂದ ಬೆಂಗಳೂರಿನ ನಾಗರಿಕರು ಈ ವರ್ಷ ಸುಡು ಬೇಸಿಗೆಯನ್ನು ಎದುರಿಸಬೇಕಾಗುತ್ತದೆ.

ಫೆಬ್ರವರಿಯಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಸರಾಸರಿ ತಾಪಮಾನ ಕಂಡಿದ್ದು, ಫೆಬ್ರವರಿಯಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಸುಮಾರು 3.6 ಡಿಗ್ರಿ ಸೆಲ್ಸಿಯಸ್ ಅಧಿಕ ತಾಪಮಾನ ದಾಖಲಾತಿಗೆ. ವರ್ಷದಿಂದ ವರ್ಷಕ್ಕೆ ತಾಪಮಾನದ ಏರಿಕೆಯನ್ನು ನೋಡುತ್ತಿದ್ದೇವೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಬೆಂಗಳೂರಿನಲ್ಲಿ ಮಾರ್ಚ್ 5 ರಂದು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.ಕರ್ನಾಟಕದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆಯ ಮುನ್ಸೂಚನೆ. ನಾಗರಿಕರು ಜಾಗರೂಕರಾಗಿರಿ. ಮಾರ್ಚ್‌ನಲ್ಲಿ ನಗರದ ಸರಾಸರಿ ತಾಪಮಾನವು 33.4 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ, ತಾಪಮಾನವು ಕೆಲವು ದಿನಗಳಲ್ಲಿ 35.5 ಡಿಗ್ರಿ ಸೆಲ್ಸಿಯಸ್‌ಗೆ ಏರಬಹುದು. "ಅಂತೆಯೇ, ಏಪ್ರಿಲ್‌ನಲ್ಲಿ ಸರಾಸರಿ ತಾಪಮಾನವು 34.1 ಡಿಗ್ರಿ ಸೆಲ್ಸಿಯಸ್ ಆಗಿದೆ, ಇದು 36 ಡಿಗ್ರಿಗಳಿಗೆ ಏರಿಕೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಇತರ ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ಮುಂದಿನ ದಿನಗಳಲ್ಲಿ ಕಂಡುಬರಲಿದೆ. ಅನೇಕ ಜಿಲ್ಲೆಗಳು, ವಿಶೇಷವಾಗಿ ಕರಾವಳಿ ಪ್ರದೇಶಗಳು ಮತ್ತು ಕರ್ನಾಟಕದ ಉತ್ತರ ಒಳಭಾಗವು ಮಾರ್ಚ್ ಅಂತ್ಯದ ವೇಳೆಗೆ ಶಾಖದ ಅಲೆಗಳನ್ನು ಅನುಭವಿಸಬಹುದು. ಇದು ಏಪ್ರಿಲ್ ಮತ್ತು ಮೇ ತಿಂಗಳವರೆಗೆ ಮುಂದುವರಿಯಬಹುದು.

SCROLL FOR NEXT