ಪ್ರಾತಿನಿಧಿಕ ಚಿತ್ರ 
ರಾಜ್ಯ

ಮೈಸೂರು: ಪತ್ನಿಯೊಂದಿಗೆ ವಿಡಿಯೋ ಕರೆ ಮಾಡುತ್ತಿದ್ದಾಗ ರೈಲಿಗೆ ಸಿಲುಕಿ ವಲಸೆ ಕಾರ್ಮಿಕ ಸಾವು

ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ವಲಸೆ ಕಾರ್ಮಿಕರೊಬ್ಬರು ಬುಧವಾರ ಮೈಸೂರು ಜಿಲ್ಲೆಯಲ್ಲಿ ತಮ್ಮ ಪತ್ನಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿದ್ದಾಗ ರೈಲಿಗೆ ಸಿಲುಕಿ ಸಾವಿಗೀಡಾಗಿದ್ದಾರೆ.

ಮೈಸೂರು: ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ವಲಸೆ ಕಾರ್ಮಿಕರೊಬ್ಬರು ಬುಧವಾರ ಮೈಸೂರು ಜಿಲ್ಲೆಯಲ್ಲಿ ತಮ್ಮ ಪತ್ನಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿದ್ದಾಗ ರೈಲಿಗೆ ಸಿಲುಕಿ ಸಾವಿಗೀಡಾಗಿದ್ದಾರೆ.

ಮೃತರನ್ನು 27 ವರ್ಷದ ಮನು ಕುಮಾರ್ ಎಂದು ಗುರುತಿಸಲಾಗಿದೆ.

ರೈಲ್ವೆ ಪೊಲೀಸರ ಪ್ರಕಾರ, ನಂಜನಗೂಡು ಪಟ್ಟಣದ ಸಮೀಪದ ಕವಲಂದೆ ಗ್ರಾಮದ ಬಳಿ ರೈಲ್ವೆ ಹಳಿಯಲ್ಲಿ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದ ಸಂತ್ರಸ್ತ ಪತ್ನಿಯೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಚಾಮರಾಜನಗರದಿಂದ ಬರುತ್ತಿದ್ದ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಮನು ನಂಜನಗೂಡು ಪಟ್ಟಣದಲ್ಲಿ ಸಹಾಯಕ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದರು. ಮೃತದೇಹವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT