ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಬಾಂಬರ್ʼನ ಮಾಸ್ಕ್ ರಹಿತ ರೇಖಾಚಿತ್ರ ಬಿಡಿಸಿದ ಕಲಾವಿದ!

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬಾಂಬರ್ ನ ಸಿಸಿಟಿವಿ ಪೋಟೋವನ್ನು ಎನ್ ಐಎ ಬಿಡುಗಡೆ ಮಾಡಿತ್ತು. ಇದೇ ಫೋಟೋವನ್ನ ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬುವವರು ಬಾಂಬರ್'ನ ರೇಖಾ ಚಿತ್ರವನ್ನು ಬಿಡಿಸಿದ್ದು, ಈ ರೇಖಾಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಲಾವಿದ ಬಿಡಿಸಿರುವ ರೇಖಾ ಚಿತ್ರ
Manjula VN
Updated On : 7 Mar 2024, 1:36 pm

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬಾಂಬರ್ ನ ಸಿಸಿಟಿವಿ ಪೋಟೋವನ್ನು ಎನ್ ಐಎ ಬಿಡುಗಡೆ ಮಾಡಿತ್ತು. ಇದೇ ಫೋಟೋವನ್ನ ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬುವವರು ಬಾಂಬರ್'ನ ರೇಖಾ ಚಿತ್ರವನ್ನು ಬಿಡಿಸಿದ್ದು, ಈ ರೇಖಾಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಿಸಿಟಿವಿಯಲ್ಲಿ ಅಸ್ಪಷ್ಟವಾಗಿರುವ ಫೋಟೋವನ್ನು ಅಧಾರಿತವಾಗಿ‌ಟ್ಟು ಹರ್ಷಾ ಅವರು ಇಮ್ಯಾಜನರಿ ಸ್ಕೆಚ್ ಬಿಡಿಸಿದ್ದಾರೆ. ಸಂಪೂರ್ಣ ಮುಖದ ರೇಖಾ ಚಿತ್ರ ಬಿಡಿಸಿರುವ ಅವರು, ನಾಲ್ಕು ಆ್ಯಂಗಲ್ ನ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ.

ಈ ರೇಖಾ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ‌ ಪೋಸ್ಟ್ ಮಾಡಿದ್ದು, ಎನ್ಐಎ ಮತ್ತು ನಗರ ‌ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

Advertisement

Advertisement

Also Read

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಾಂಬರ್ ಭಟ್ಕಳಕ್ಕೆ ತೆರಳಿರುವ ಶಂಕೆ; ಬಳ್ಳಾರಿ-ತುಮಕೂರು ಬಸ್‌ ನಿಲ್ದಾಣದಲ್ಲಿ NIA ಶೋಧ

ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟದ ಶಂಕಿತ ವ್ಯಕ್ತಿಯ ಮಾಸ್ಕ್ ಇಲ್ಲದ ಫೋಟೋವನ್ನು ಎನ್ಐಎ ರಿಲೀಸ್ ಮಾಡಿದ್ದು, ಶಂಕಿತ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ. ಅಲ್ಲದೇ ಮಾಹಿತಿದಾರರ ಗುರುತನ್ನು ಗೌಪ್ಯವಾಗಿ ಇರಿಸಲಾಗುವುದು ಎಂದೂ ಹೇಳಿದೆ.

ಶಂಕಿತ ಉಗ್ರನ ಸುಳಿವು ಸಿಕ್ಕರೆ 080-29510900, 8904241100 ಸಂಖ್ಯೆಗೆ ಕರೆ ಮಾಡುವಂತೆ ಎನ್ಐಎ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. Info.blr.nia@gov.in ಗೂ ಮೇಲ್ ಮಾಡಿ ಶಂಕಿತನ ಮಾಹಿತಿಯನ್ನು ಅಧಿಕಾರಿಗಳ ಜೊತೆ ಹಂಚಿಕೊಳ್ಳಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments