ಕುಡಿಯುವ ನೀರಿನ ಸಮಸ್ಯೆ 
ರಾಜ್ಯ

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಸರ್ಕಾರದ ಅವೈಜ್ಞಾನಿಕ ಕ್ರಮಗಳ ವಿರುದ್ಧ ಬಿಜೆಪಿ ಕಿಡಿ

ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದು, ನಗರದಲ್ಲಿ ನೀರಿನ ಸಮಸ್ಯೆ ತಲೆದೋರಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಬೆಂಗಳೂರು: ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದು, ನಗರದಲ್ಲಿ ನೀರಿನ ಸಮಸ್ಯೆ ತಲೆದೋರಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿದೆ. ರಾಜ್ಯ ಸರ್ಕಾರ ತಕ್ಷಣವೇ ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಯುದ್ಧೋಪಾದಿಯಲ್ಲಿ ಬಗೆಹರಿಸದಿದ್ದರೆ ಬೆಂಗಳೂರು ನಾಗರಿಕರ ಪರವಾಗಿ ಬಿಜೆಪಿ ಪಕ್ಷವು ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ಬೆಂಗಳೂರು ನಗರದಲ್ಲಿ ಪ್ರಸ್ತುತ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದೆ. ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆಯ ಅರಿವು ಇದ್ದರೂ ಕೂಡ ರಾಜ್ಯ ಸರ್ಕಾರವು ಬೇಜವಾಬ್ದಾರಿತನದಿಂದ ವರ್ತಿಸಿರುವ ಪರಿಣಾಮ ಬೆಂಗಳೂರಿನ ಜನತೆ ಇಂದು ಸಂಕಟಪಡುವ ಸ್ಥಿತಿ ಬಂದಿದೆ.

ಬೆಂಗಳೂರು ನಗರದ ಬಹುತೇಕ ಭಾಗಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸರ್ಕಾರ ಅವೈಜ್ಞಾನಿಕ ತೀರ್ಮಾನ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕಿದೆ ಈ ಕುರಿತಾದ ಕೆಲ ಸಲಹೆಗಳನ್ನು ನಾನು BWSSB ಗೆ ನೀಡಿದ್ದೇನೆ.

ಕೈಗಾರಿಕೆಗಳು, ಕಟ್ಟಡ ನಿರ್ಮಾಣಕ್ಕೆ ಕುಡಿಯಲು ಯೋಗ್ಯವಲ್ಲದ ನೀರನ್ನು ಬಳಸಬೇಕು, ಕುಡಿಯುವ ನೀರನ್ನು ಎಲ್ಲೆಲ್ಲಿ ತೊಂದರೆ ಇದೆಯೋ ಅಲ್ಲಿಗೆ ಸರಬರಾಜು ಮಾಡಬೇಕು. ಸಂಸ್ಕರಣೆಯ ನೀರಿನ ಪ್ರಮಾಣ 1300 MLD ರಷ್ಟು ಇದ್ದು, ಇದನ್ನು ನೀರಿನ ಮರುಪೂರಣ ಜಾಲಕ್ಕೆ ಬಳಸಬಹುದಾಗಿದೆ. ಭೂ ವಿಜ್ಞಾನಿಗಳ ಸಲಹೆ ಮೇರೆಗೆ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಬೋರ್ ವೆಲ್ ಕೊರೆಸಿ, ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕಳೆದ ಕೆಲ ತಿಂಗಳುಗಳಿಂದ ನಿಷ್ಕ್ರಿಯ ಸ್ಥಿತಿಯಲ್ಲಿರುವ ಬೋರ್ ವೆಲ್ ಗಳನ್ನು ಗುರುತಿಸಿ, ಅವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೊರೆಯಿಸಬೇಕಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಟ್ಯಾಂಕರ್ ವ್ಯವಸ್ಥೆಯನ್ನು ಮುಂದುವರೆಸುವುದು. ಕಾವೇರಿ 5ನೇ ಹಂತದ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ, ನಿಗದಿತ ಸ್ಥಳಗಳಲ್ಲಿ ಬೆಂಗಳೂರಿನ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವುದು.

ಇವೆಲ್ಲ ಪರಿಹಾರಗಳನ್ನು ಒಂದು ವಾರದಲ್ಲಿ ಬಗೆಹರಿಸಲು ಮನವಿ ಸಲ್ಲಿಸಲಾಗಿದ್ದು, ಇಲ್ಲದಿದ್ದಲ್ಲಿ ವಿಧಾನಸೌಧದ ಮುಂದೆ ಬೆಂಗಳೂರಿನ ಜನತೆಯ ಪರವಾಗಿ ಧರಣಿ ನಡೆಸುವುದಾಗಿ ತಿಳಿಸಿದ್ದೇನೆಂದು ಹೇಳಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪೋಸ್ಟ್ ಮಾಡಿ, ಕಾಂಗ್ರೆಸ್ ಸರ್ಕಾರದ ತಪ್ಪಾದ ಆದ್ಯತೆಗಳು, ದೂರದೃಷ್ಟಿಯ ಕೊರತೆ ಮತ್ತು ಅಸಮರ್ಪಕ ನಿರ್ವಹಣೆಯಿಂದಾಗಿ ಬೆಂಗಳೂರು ಇಂದು ನೀರಿನ ಬಿಕ್ಕಟ್ಟನ್ನು ಎದುರಿಸುವಂತೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜನರಿಗೆ ಉತ್ತರದಾಯಿಗಳಾಗಿದ್ದು, ಬೆಂಗಳೂರಿಗೆ ನೀರಿನ ಗ್ಯಾರಂಟಿಯನ್ನು ಸರ್ಕಾರ ಯಾವಾಗ ಖಚಿತಪಡಿಸುತ್ತದೆ ಎಂದು ಜನರು ಕೇಳುತ್ತಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT