ಬಾಲ‌ ಮಂಜುನಾಥ ಸ್ವಾಮೀಜಿ(ಸಂಗ್ರಹ ಚಿತ್ರ) 
ರಾಜ್ಯ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಹುಲಿಯೂರು ದುರ್ಗದ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮೀಜಿ ಬಂಧನ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರನಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ‌ ಮಂಜುನಾಥ ಸ್ವಾಮೀಜಿಯನ್ನು ಪೊಲೀಸರು ಗುರುವಾರ ಕಳೆದ ತಡರಾತ್ರಿ ಬಂಧಿಸಿದ್ದಾರೆ.

ಕುಣಿಗಲ್ (ತುಮಕೂರು): ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರನಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ‌ ಮಂಜುನಾಥ ಸ್ವಾಮೀಜಿಯನ್ನು ಪೊಲೀಸರು ಗುರುವಾರ ಕಳೆದ ತಡರಾತ್ರಿ ಬಂಧಿಸಿದ್ದಾರೆ.

ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ ಸ್ವಾಮೀಜಿ ಕಡೆಯಿಂದಲೇ ಕೆಲವರ ವಿರುದ್ಧ ದೂರು ದಾಖಲಾಗಿತ್ತು. ಆದರೆ, ಅದೇ ಆರೋಪಿಗಳು ಸ್ವಾಮೀಜಿಯವರ ಬೇರೊಂದು ಹಗರಣವೊಂದನ್ನು ವಿಚಾರಣೆ ವೇಳೆ ಬಯಲು ಮಾಡಿದ್ದಾರೆ. ಹಾಗಾಗಿ, ಪೊಲೀಸರು ಸ್ವಾಮೀಜಿಯವರನ್ನು ಬಂಧಿಸಿದ್ದಾರೆಂದು ಹೇಳಲಾಗಿದೆ.

ಅಭಿಷೇಕ್ ಎಂಬುವವರು ನೀಡಿದ ಕೆಲವು ಮಾಹಿತಿಯ ಮೇರೆಗೆ, ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು ಮಠಕ್ಕೆ ಭೇಟಿ ನೀಡಿ ನಿನ್ನೆ ಗುರುವಾರ ಸಂಜೆಯಿಂದ ಪರಿಶೀಲನೆ ನಡೆಸಿದ್ದರು. ಎಸ್.ಪಿ.ಅಶೋಕ್ ಕೆ.ವಿ.ಸೇರಿದಂತೆ ನಾನಾ ಅಧಿಕಾರಿಗಳು ತಡರಾತ್ರಿವರೆಗೂ ತನಿಖೆ ನಡೆಸಿದ್ದರು.

ದೇವಸ್ಥಾನದ ಟ್ರಸ್ಟಿ ನೀಡಿದ್ದ ದೂರಿನನ್ವಯ ಪೊಲೀಸರು ಅಭಿಷೇಕ್ ರನ್ನು ಕರೆಯಿಸಿ ವಿಚಾರಣೆ ನಡೆಸಿದಾಗ ಸ್ವಾಮೀಜಿಯವರು ಹಲವು ದಿನಗಳ ಹಿಂದೆ ಮಠದಲ್ಲಿ ಅಪ್ರಾಪ್ತೆಯೊಬ್ಬಳಿಗೆ ಲೈಂಗಿಕ ಕಿರುಕುಳ ಕೊಟ್ಟಿರುವುದಾಗಿ ಆರೋಪಿಸಿದ್ದ. ಈ ವಿಚಾರ ಪೋಕ್ಸೋ ಕಾಯ್ದೆಯಡಿ ಬರುವುದರಿಂದ ಮಠಕ್ಕೆ ಆಗಮಿಸಿದ ಪೊಲೀಸರು, ಗುರುವಾರ ಸಂಜೆಯಿಂದಲೇ ಮಠದಲ್ಲಿ ಪರಿಶೀಲನೆ ನಡೆಸಿದ್ದರು. ಆಗ ಸಿಕ್ಕ ಕೆಲವು ದಾಖಲೆಗಳನ್ನು ಆಧರಿಸಿ, ಸ್ವಾಮೀಜಿಯವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT