ಬೆಂಗಳೂರು: ವಾರದ ಬಳಿಕ ರಾಮೇಶ್ವರಂ ಕೆಫೆ ಪುನರಾರಂಭ!
ಬಾಂಬ್ ಸ್ಫೋಟ ಸಂಭವಿಸಿದ ವಾರದ ಬಳಿಕ ಬೆಂಗಳೂರಿನ ರಾಮೇಶ್ವರಂ ಮತ್ತೆ ಶುಕ್ರವಾರ ಕಾರ್ಯಾರಂಭ ಮಾಡಿದೆ.
ಬೆಂಗಳೂರು: ಬಾಂಬ್ ಸ್ಫೋಟ ಸಂಭವಿಸಿದ ವಾರದ ಬಳಿಕ ಬೆಂಗಳೂರಿನ ರಾಮೇಶ್ವರಂ ಮತ್ತೆ ಶುಕ್ರವಾರ ಕಾರ್ಯಾರಂಭ ಮಾಡಿದೆ.
ಶಿವರಾತ್ರಿ ದಿನವೇ ಕೆಫೆ ಪುನರಾರಂಭ ಮಾಡುವುದಾಗಿ ಕೆಫೆ ಮಾಲೀಕರು ತಿಳಿಸಿದ್ದರು. ಅದರಂತೆ ಶುಕ್ರವಾರ ಬೆಳಿಗ್ಗೆಯೇ ಕೆಫೆ ಪುನರಾರಂಭಗೊಂಡಿದೆ.
ಕೆಫೆಯಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ನೆರವೇರಿದವು. ಆ ಮೂಲಕ ಮತ್ತೆ ಗ್ರಾಹಕರಿಗೆ ಕೆಫೆ ಮುಕ್ತವಾಗಿದೆ.
ಇನ್ನು ಬಾಂಬ್ ಸ್ಫೋಟದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಕೆಫೆ ಮಾಲೀಕರು, ಇದೀಗ ಪುನರಾರಂಭದ ವೇಳೆ ಸೂಕ್ತ ಮುನ್ನೆಚ್ಚರಿಕೆ, ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಕೆಫೆಯ ಪ್ರವೇಶ ದ್ವಾರದ ಬಳಿ 2 ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಶನಿವಾರದಿಂದ ಪ್ರತಿ ಗ್ರಾಹಕರನ್ನು ಹ್ಯಾಂಡ್ ಡಿಟೆಕ್ಟರ್ ಮೂಲಕ ತಪಾಸಣೆ ಮಾಡಿಯೇ ಒಳ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತದೆ. ಈ ನಡುವೆ ಕೆಫೆ ಸುತ್ತ ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಶುಕ್ರವಾರ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಬಾಂಬ್ ಇಟ್ಟು ಹೋಗಿದ್ದ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಘಟನೆ ಸಂಬಂಧ ತನಿಖೆಯೂ ಪ್ರಗತಿಯಲ್ಲಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.