ಸಂಗ್ರಹ ಚಿತ್ರ 
ರಾಜ್ಯ

ರಂಜಾನ್ ಪ್ರಯುಕ್ತ ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆಗಳ ಸಮಯ ಬದಲಿಸಿದ ರಾಜ್ಯ ಸರ್ಕಾರ

ರಂಜಾನ್ ಆಚರಣೆಗಾಗಿ ಮುಸ್ಲಿಂ ಶಾಲಾ ಮಕ್ಕಳ ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು: ರಂಜಾನ್ ಆಚರಣೆಗಾಗಿ ಮುಸ್ಲಿಂ ಶಾಲಾ ಮಕ್ಕಳ ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರಂಜಾನ್ ಆರಂಭ ದಿನದಿಂದ ಹಿಡಿದು 1 ತಿಂಗಳ ಕಾಲ ಉರ್ದು ಶಾಲಾ ಸಮಯದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ರಂಜಾನ್ ತಿಂಗಳ ಆರಂಭದಿಂದ ಏಪ್ರಿಲ್ 10 2024ರವೆಗೆ ಉರ್ದು ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆ. ಇದೇ ವೇಳೆ ಇತರ ಸರ್ಕಾರಿ ಅನುದಾನ ಮತ್ತು ಅನುದಾನ ರಹಿತ ಶಾಲೆಯಲ್ಲಿನ ಮುಸ್ಲಿಂ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳು ಸಂಜೆ ಅರ್ಧಗಂಟೆ ಮುಂಚಿತವಾಗಿ ತೆರಳಲು ಅನುಮತಿ ನೀಡಲಾಗಿದೆ.

ಉರ್ದು ಶಾಲೆಯ ವೇಳಾಪಟ್ಟಿ ಬದಲಾಯಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಂಜಾನ್ ತಿಂಗಳಲ್ಲಿ ಉರ್ದು ಶಾಲೆಗಳಿಗೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12-45 ದರ ವೆರೆಗೆ ಸಮಯ ನಿಗದಿ ಮಾಡಲಾಗಿದೆ. ಜತೆಗೆ, ರಂಜಾನ್ ತಿಂಗಳಲ್ಲಿ ಕಡಿತಗೊಳ್ಳುವ ಶಾಲಾ ಸಮಯವನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ರಂಜಾನ್ ತಿಂಗಳಲ್ಲಿ ಉರ್ದು ಶಾಲೆಯ ಸಮಯ ಬದಲಾವಣೆಗೆ ಕೆಲ ಮುಸ್ಲಿಂ ಶಾಸಕರು ಮನವಿ ಮಾಡಿದ್ದರು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಉರ್ದು ಶಾಲೆಗಳ ಸಮಯ ಬದಲಾಯಿಸಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT