ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (ಕಪ್ಪು ಕೋಟ್‌ನಲ್ಲಿ) ಗುರುವಾರ ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪಕ್ಷದ ಸ್ಥಳೀಯ ಮುಖಂಡರು ಇದ್ದಾರೆ. 
ರಾಜ್ಯ

ಲೋಕಸಭಾ ಚುನಾವಣೆ: ಕಾಂಗ್ರೆಸ್‌ಗೆ ಕರ್ನಾಟಕ ಎಟಿಎಂ ಆಗಿದೆ: ಗೋವಾ ಸಿಎಂ ಪ್ರಮೋದ್ ಸಾವಂತ್

ಮುಂಬರುವ ಲೋಕಸಭಾ ಚುನಾವಣೆಗೆ ಹಣ ಹೂಡಲು ಕಾಂಗ್ರೆಸ್‌ಗೆ ಕರ್ನಾಟಕವು ಎಟಿಎಂ ಆಗಿ ಮಾರ್ಪಟ್ಟಿದೆ ಎಂದು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಗುರುವಾರ ಹೇಳಿದ್ದಾರೆ.

ದಾವಣಗೆರೆ/ಚಿತ್ರದುರ್ಗ: ಮುಂಬರುವ ಲೋಕಸಭಾ ಚುನಾವಣೆಗೆ ಹಣ ಹೂಡಲು ಕಾಂಗ್ರೆಸ್‌ಗೆ ಕರ್ನಾಟಕವು ಎಟಿಎಂ ಆಗಿ ಮಾರ್ಪಟ್ಟಿದೆ ಎಂದು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಗುರುವಾರ ಹೇಳಿದ್ದಾರೆ.

ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದ್ದು, ಖಾತರಿಗಳ ಭರವಸೆ ನೀಡಿತು ಮತ್ತು ಈಗ ಅವುಗಳನ್ನು ಅನುಷ್ಠಾನಗೊಳಿಸಲು ಸಂಪೂರ್ಣವಾಗಿ ವಿಫಲವಾಗಿದೆ. ಏಕೆಂದರೆ ಹಣವನ್ನು ಬೇರೆಡೆಗೆ ತಿರುಗಿಸಲಾಗಿದೆ. ಇದರಿಂದಾಗಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು. ಮೋದಿ ಭರವಸೆಯನ್ನು ಮಾತ್ರ ಜನರು ನಂಬಬಹುದು ಎಂದರು.

‘ಸಿದ್ದರಾಮಯ್ಯ ಅವರೊಬ್ಬರೇ ಸರ್ಕಾರ ನಡೆಸುತ್ತಿಲ್ಲ, ಐವರು ಸಿಎಂಗಳಾದ ಡಾ. ಜಿ ಪರಮೇಶ್ವರ, ಸತೀಶ್ ಜಾರಕಿಹೊಳಿ, ಡಿಸಿಎಂ ಡಿಕೆ ಶಿವಕುಮಾರ್, ಸೂಪರ್ ಸಿಎಂ ಪ್ರಿಯಾಂಕ್ ಖರ್ಗೆ ಮತ್ತು ಶಾಡೋ ಸಿಎಂ ಡಾ. ಯತೀಂದ್ರ’ ಸರ್ಕಾರ ನಡೆಸುತ್ತಿದ್ದಾರೆ ಎಂದು ಹೇಳಿದರು.

'ಕೇಂದ್ರದಲ್ಲಿ, ನಾವು ದೇಶವನ್ನು ಆಳುತ್ತಿರುವ ಏಕೈಕ ನಾಯಕನನ್ನು ಹೊಂದಿದ್ದೇವೆ. ಅದುವೇ ಪ್ರಧಾನಿ ನರೇಂದ್ರ ಮೋದಿ. ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದರಿಂದ ಕೇಂದ್ರದ ಯೋಜನೆಗಳು ಇಲ್ಲಿನ ಜನರಿಗೆ ತಲುಪುತ್ತಿಲ್ಲ ಮತ್ತು ರಾಜ್ಯ ಸರ್ಕಾರ ತನ್ನ ವೈಫಲ್ಯಕ್ಕೆ ಕೇಂದ್ರವನ್ನು ದೂಷಿಸುತ್ತಿದೆ' ಎಂದು ಆರೋಪಿಸಿದರು.

ಚುನಾವಣಾ ಖಾತರಿಗಳ ಅನುಷ್ಠಾನದ ಕುರಿತು ಬಹಿರಂಗವಾಗಿ ಚರ್ಚೆ ನಡೆಸಲಿ ಎಂದು ಸಾವಂತ್ ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲು ಎಸೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT