ಸಂಗ್ರಹ ಚಿತ್ರ
ಸಂಗ್ರಹ ಚಿತ್ರ 
ರಾಜ್ಯ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ಆರೋಪಿ ಮೊಹಮ್ಮದ್ ಶಫಿ ನಾಶಿಪುಡಿಗೆ 14 ದಿನ ನ್ಯಾಯಾಂಗ ಬಂಧನ

Manjula VN

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ಶಫಿ ನಾಶಿಪುಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

ಪ್ರಕರಣ ಸಂಬಂಧ ಬಂದಿತನಾಗಿದ್ದ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಹಮ್ಮದ್ ಶಫಿ ನಾಶಿಪುಡಿಯನ್ನು ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ನಾಶಿಪುಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ವಿವಾದಕ್ಕೆ ಕಾರಣವಾಗಿತ್ತು. ಆರೋಪಿಗಳನ್ನು ಬಂಧಿಸುವಂತೆ ಭಾರಿ ಆಗ್ರಹ ವ್ಯಕ್ತವಾಗಿತ್ತು.

ರಾಜಕೀಯ ಆರೋಪ ಪ್ರತ್ಯಾರೋಪಗಳ ನಡುವೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು, ಎಫ್.ಎಸ್.ಎಲ್. ವರದಿ ಆಧರಿಸಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದರು.

SCROLL FOR NEXT