ಎನ್ಐಎ
ಎನ್ಐಎ 
ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ; NIAಗೆ ಮಹತ್ವದ ಸುಳಿವು, ಮೂವರು ಶಂಕಿತರು ವಶಕ್ಕೆ!

Vishwanath S

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಸಂಬಂಧ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಪ್ರಕರಣ ಸಂಬಂಧ ಶಂಕಿತ ಉಗ್ರ ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದೇ ವೇಳೆ ನ್ಯಾಯಾಲಯದ ಆದೇಶದ ಮೇರೆಗೆ ಬಳ್ಳಾರಿಯ ಸೈಯದ್ ಸಮೀರ್, ಮುಂಬೈ ನ ಅನಾಸ್ ಇಕ್ಬಾಲ್ ಶೇಖ್ ಹಾಗೂ ದೆಹಲಿಯ ಶಯಾನ್ ರಹಮಾನ್ ಅಲಿಯಾಸ್ ಹುಸೈನ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ವಶಕ್ಕೆ ಪಡೆದಿರುವ ಶಂಕಿತ ಉಗ್ರರು ISIS ಜೊತೆ ನಂಟು ಹೊಂದಿದ್ದಾರೆ. ದೇಶದಲ್ಲಿ ವಿದ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್ಐಎ ಅಧಿಕಾರಿಗಳು 2023ರ ಡಿಸೆಂಬರ್ 18ರಂದು ಮಿನಾಜ್ ಹಾಗೂ ಇತರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಸದ್ಯ ವಶಕ್ಕೆ ಪಡೆದಿರುವ ಶಂಕಿತರನ್ನು ಬಳ್ಳಾರಿಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

SCROLL FOR NEXT