ಸುಧಾ ಮೂರ್ತಿ 
ರಾಜ್ಯ

ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ: ಡಬಲ್‌ ಅಚ್ಚರಿ ಎಂದ ಸುಧಾ ಮೂರ್ತಿ

ವಿಶ್ವ ಮಹಿಳಾ ದಿನಾಚರಣೆಯಂದೆ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಡಬಲ್ ಅಚ್ಚರಿ ಮೂಡಿಸಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಮಾಜಿ ಮುಖ್ಯಸ್ಥೆ, ಲೇಖಕಿ ಸುಧಾ ಮೂರ್ತಿ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆಯಂದೆ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಡಬಲ್ ಅಚ್ಚರಿ ಮೂಡಿಸಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಮಾಜಿ ಮುಖ್ಯಸ್ಥೆ, ಲೇಖಕಿ ಸುಧಾ ಮೂರ್ತಿ ಅವರು ಶುಕ್ರವಾರ ಹೇಳಿದ್ದಾರೆ.

ತಾನು ಎಂದಿಗೂ ಈ ಸ್ಥಾನವನ್ನು ನಿರೀಕ್ಷೆ ಮಾಡಿರಲಿಲ್ಲ ಮತ್ತು ಕೇಂದ್ರ ಸರ್ಕಾರ ನನ್ನನ್ನು ರಾಜ್ಯಸಭೆಗೆ ಏಕೆ ನಾಮನಿರ್ದೇಶನ ಮಾಡಿದೆ ಅಂತ "ಸಂಪೂರ್ಣವಾಗಿ ಗೊತ್ತಿಲ್ಲ" ಎಂದು ಇನ್ಫೋಸಿಸ್‌ನ ಲೋಕೋಪಕಾರ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ(CSR) ಅಂಗವಾದ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹೇಳಿದ್ದಾರೆ.

"ಇದು ಮಹಿಳಾ ದಿನದಂದು ರಾಜ್ಯಸಭೆಗೆ ಆಯ್ಕೆ ಮಾಡಿರುವುದು ಡಬಲ್ ಆಶ್ಚರ್ಯಕರವಾಗಿದೆ. ನನಗೆ ತುಂಬಾ ಸಂತೋಷವಾಗಿದೆ. ನಾನು ನಮ್ಮ ಪ್ರಧಾನಿಗೆ ಕೃತಜ್ಞಳಾಗಿದ್ದೇನೆ" ಎಂದು ಪ್ರಸ್ತುತ ಥಾಯ್ಲೆಂಡ್ ಪ್ರವಾಸದಲ್ಲಿರುವ ಸುಧಾ ಮೂರ್ತಿ ಫೋನ್ ಮೂಲಕ ಪಿಟಿಐಗೆ ತಿಳಿಸಿದ್ದಾರೆ.

ಮೇಲ್ಮನೆ ಸದಸ್ಯೆಯಾಗಿ ನಾನು ಏನು ಮಾಡಬಲ್ಲೆ ಎಂಬುದನ್ನು ನೋಡಬೇಕಾಗಿದೆ. ಇದು ನನಗೆ ಹೊಸ ಕ್ಷೇತ್ರವಾಗಿದೆ. ಹಾಗಾಗಿ, ನಾನು ಮೊದಲು ಕುಳಿತು ಅಧ್ಯಯನ ಮಾಡಬೇಕು ಮತ್ತು ನಂತರ ನಾನು ಏನು ಮಾಡಲು ಸಾಧ್ಯ ಅಂತ ಗೊತ್ತಾಗುತ್ತದೆ ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರ ಪತ್ನಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ