ಬೀದರ್ನಲ್ಲಿ ಕಾಡುಹಂದಿ ದಾಳಿಗೆ ಮಹಿಳೆ ಸಾವು: ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ವಿತರಣೆ!
ಬೀದರ್ ಹೊಕ್ರಾಣ ಗ್ರಾಮದಲ್ಲಿ ಕಾಡುಹಂದಿ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದು ರಾಜ್ಯ ಸರ್ಕಾರ ಪರಿಹಾರ ಮೊತ್ತ ವಿತರಿಸಿದೆ.
ಬೀದರ್: ಬೀದರ್ ಹೊಕ್ರಾಣ ಗ್ರಾಮದಲ್ಲಿ ಕಾಡುಹಂದಿ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದು ರಾಜ್ಯ ಸರ್ಕಾರ ಪರಿಹಾರ ಮೊತ್ತ ವಿತರಿಸಿದೆ.
ಮೃತ ಮಹಿಳೆಯನ್ನು 45 ವರ್ಷದ ಕವಿತಾ ಎಂದು ಗುರುತಿಸಲಾಗಿದೆ. ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದಾಗ ಕಾಡುಹಂದಿ ದಾಳಿ ಮಾಡಿತ್ತು. ಕಾಡುಹಂದಿ ಮಹಿಳೆಯ ಹೊಟ್ಟೆಗೆ ಕಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಹಿಳೆ ಸಾವನ್ನಪ್ಪಿದ್ದರು.
ಮೃತ ಕುಟುಂಬದ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ತಕ್ಷಣವೇ ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು. ಇನ್ಮುಂದೆ ಇಂತಹ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿಲು ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.