ಮೆಟ್ರೋ ರೈಲು ಸಾಂದರ್ಭಿಕ ಚಿತ್ರ
ಮೆಟ್ರೋ ರೈಲು ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆ 'ನಮ್ಮ ಮೆಟ್ರೋ' ರೈಲು ಒಂದು ಗಂಟೆ ಮುಂಚಿತವಾಗಿ ಆರಂಭ!

Nagaraja AB

ಬೆಂಗಳೂರು: ನಾಳೆ ನಮ್ಮ ಮೆಟ್ರೋ ಸೇವೆ ಒಂದು ಗಂಟೆ ಮುಂಚಿತವಾಗಿ ಆರಂಭವಾಗಲಿದೆ. ಕರ್ನಾಟಕ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮಾರ್ಚ್ 10 ರಂದು ಬೆಳಗ್ಗೆ ಎಂದಿಗಿಂತ ಒಂದು ಗಂಟೆ ಬೇಗನೆ ಮೆಟ್ರೋ ರೈಲು ಕಾರ್ಯಾಚರಣೆ ನಡೆಸಲಿದೆ.

ಹಸಿರು ಮತ್ತು ನೇರಳೆ ಮಾರ್ಗಗಳ ಎಲ್ಲ ನಾಲ್ಕು ಟರ್ಮಿನಲ್ ಗಳಲ್ಲಿ ವಾರದ ದಿನಗಳಲ್ಲಿ ಬೆಳಿಗ್ಗೆ 5ಕ್ಕೆ ಮತ್ತು ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ರೈಲು ಕಾರ್ಯಾಚರಣೆ ಆರಂಭವಾಗುತಿತ್ತು. ನಾಳೆ ಮಾತ್ರ ಬೆಳಿಗ್ಗೆ 6ಕ್ಕೆ ಆರಂಭಗೊಳ್ಳಲಿದೆ ಎಂದು ಬಿಎಂಆರ್ ಸಿಎಲ್ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

SCROLL FOR NEXT