ಜನರಲ್ ಕೆ. ಎಸ್ ತಿಮ್ಮಯ್ಯ ಪ್ರತಿಮೆ 
ರಾಜ್ಯ

ಮಡಿಕೇರಿ: ಜನರಲ್ ತಿಮ್ಮಯ್ಯ ಪ್ರತಿಮೆ ಮರು ಸ್ಥಾಪನೆ

ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ. ಎಸ್ ತಿಮ್ಮಯ್ಯ ನವರ ನೂತನ ಪ್ರತಿಮೆಯನ್ನು ಸಕಲ ಗೌರವದೊಂದಿಗೆ ಮಡಿಕೇರಿಯ ನೇಮಸೇಕ್ ವೃತ್ತದಲ್ಲಿ ಶುಕ್ರವಾರ ಮರು ಸ್ಥಾಪಿಸಲಾಯಿತು.

ಮಡಿಕೇರಿ: ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ. ಎಸ್ ತಿಮ್ಮಯ್ಯ ನವರ ನೂತನ ಪ್ರತಿಮೆಯನ್ನು ಸಕಲ ಗೌರವದೊಂದಿಗೆ ಮಡಿಕೇರಿಯ ನೇಮಸೇಕ್ ವೃತ್ತದಲ್ಲಿ ಶುಕ್ರವಾರ ಮರು ಸ್ಥಾಪಿಸಲಾಯಿತು.

ಜಿಲ್ಲಾಡಳಿತ, ನಗರಸಭೆ ಉಸ್ತುವಾರಿಯಲ್ಲಿ ನಡೆದ ಕಾರ್ಯಕ್ರದಲ್ಲಿ ಜನರಲ್ ಕೆ.ಎಸ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುಷ್ಪನಮನದ ಮೂಲಕ ನಿವೃತ್ತದ ಏರ್ ಮಾರ್ಷಲ್ ನಂದಾ ಕಾರ್ಯಪ್ಪಮತ್ತು ಮಾಜಿ ಸಚಿವ ಎಂ.ಸಿ.ನಾಣಯ್ಯ ಅನಾವರಣಗೊಳಿಸಿದರು.

ನೂತನ ಪ್ರತಿಮೆ ಅನಾವರಣದ ಸಂದರ್ಭದಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಐದು ದಶಕಗಳ ಹಿಂದೆ ಜ.ತಿಮ್ಮಯ್ಯ ಅವರ ಪ್ರತಿಮೆ ಸ್ಥಾಪನೆಗೆ ಕಾರಣರಾಗಿದ್ದ ಮಾಜಿ ಸಚಿವ ಎಂ.ಸಿ.ನಾಣಯ್ಯ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಜಿಲ್ಲಾಧಿಕಾರಿಗಳಾದ ವೆಂಕಟರಾಜ್, ಮಾಜಿ ಶಾಸಕ ಕೆಜಿ.ಬೋಪಯ್ಯ ವಿದಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಜನರಲ್ ತಿಮ್ಮಯ್ಯ ಫೋರಂ ನ ಅಧ್ಯಕ್ಷರಾದ ಕರ್ನಲ್ ಕೆ. ಸುಬ್ಬಯ್ಯ, ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಬಿ.ಎ ಕಾರ್ಯಪ್ಪ, ಮುಂತಾದವರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಏರ್ ಮಾರ್ಷಲ್ ಕರಿಯಪ್ಪ ಅವರು, ಜನರಲ್ ಕೆಎಸ್ ತಿಮ್ಮಯ್ಯ ಒಬ್ಬ ಶ್ರೇಷ್ಠ ಭಾರತೀಯ. ಅವರು ಯುವಕರಿಗೆ ಸ್ಪೂರ್ತಿಯಾಗಿದ್ದಾರೆ. 51 ವರ್ಷಗಳ ಹಿಂದೆ ಮಡಿಕೇರಿಯಲ್ಲಿ 1973ರಲ್ಲಿ ಪ್ರತಿಮೆ ಸ್ಥಾಪನೆಯಾಗಿತ್ತು. ಇದಕ್ಕೆ ಮಾಜಿ ಎಂಎಲ್‌ಸಿ ಎಂ.ಸಿ.ನಾಣಯ್ಯ ಕಾರಣಕರ್ತರಾಗಿದ್ದಾರೆ. ಒಳ್ಳೆಯದೆಲ್ಲದರ ಸಾಕಾರರೂಪ ತಿಮ್ಮಯ್ಯ. ಭಾರತೀಯ ಎಂಬ ಅವರ ಧ್ಯೇಯವಾಕ್ಯವನ್ನು ನಾವೆಲ್ಲರೂ ಅನುಸರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮೇಜರ್ ಬಾಚಮಾಡ ಕಾರಿಯಪ್ಪ (ನಿವೃತ್ತ) ಮಾತನಾಡಿ, ಜನರಲ್ ತಿಮ್ಮಯ್ಯ ಅವರು ಅಮರರಾಗಿ ಉಳಿದಿದ್ದಾರೆಂದು ಹೇಳಿದರು.

ಕರ್ನಲ್ ಕೆ ಸುಬ್ಬಯ್ಯ (ನಿವೃತ್ತ) ಅವರು ಮಾತನಾಡಿ, ಪ್ರತಿಮೆಯ ಪುನರ್ ಪ್ರತಿಷ್ಠಾಪನೆಗೆ ಕಾರಣವಾದ ಸಂಸ್ಥೆಗಳನ್ನು ಅಭಿನಂದಿಸಿದರು. ಜನರಲ್ ತಿಮ್ಮಯ್ಯ ತಮ್ಮ ಸ್ಥಾನಕ್ಕೆ ಮರಳಿದ್ದು, ಮಡಿಕೇರಿಯನ್ನು ಕಾಯುತ್ತಿದ್ದಾರೆಂದು ಹೇಳಿದರು.

ಕಳೆದ ವರ್ಷ ಆಗಸ್ಟ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ ಸಂದರ್ಭದಲ್ಲಿ ಪ್ರತಿಮೆಗೆ ಹಾನಿಯಾಗಿತ್ತು. ಬಳಿಕ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಪ್ರತಿಮೆಯನ್ನು ಸರಿಪಡಿಸಿದ್ದರು. ನಂತರ ಪ್ರತಿಮೆಯನ್ನು ಮೈಸೂರಿನಿಂದ ಮೆರವಣಿಗೆಯಲ್ಲಿ ತರಲಾಯಿತು. ಮೆರವಣಿಗೆಯಲ್ಲಿ ಹಲವಾರು ಯುವಕರು ಪಾಲ್ಗೊಂಡಿದ್ದರು.

ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಎಂಎಲ್ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಡಿಸಿ ವೆಂಕಟ್ ರಾಜ, ಎಸ್ಪಿ ಕೆ.ರಾಮರಾಜನ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT