ಮಾಜಿ ಶಾಸಕ ವಾಸು 
ರಾಜ್ಯ

ಮೈಸೂರು: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವಾಸು ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ.

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ನಿಧನರಾಗಿದ್ದಾರೆ

ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾದರು. ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮಾಲೀಕರಾಗಿರುವ ಇವರು ‘ಪ್ರಜಾನುಡಿ’ ಪತ್ರಿಕೆ ಮಾಲೀಕರಾಗಿದ್ದರು. ಮೈಸೂರು ನಗರದ ಚಾಮರಾಜ ಕ್ಷೇತ್ರದಲ್ಲಿ 2014ರಲ್ಲಿ ಶಾಸಕರಾಗಿದ್ದ ವಾಸು 2019ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿತ್ತು.‌ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ದ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುವ ಮೂಲಕ ಸುದ್ದಿಯಾಗಿದ್ದರು.

ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿಯವರಿಗೆ ಆಪ್ತರಾಗಿದ್ದ ವಾಸುರವರು ಮೊಯ್ಲಿ ಅವಧಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT