ಮೃತ ಆನೆ ಲತಾ
ಮೃತ ಆನೆ ಲತಾ 
ರಾಜ್ಯ

ಮಹಾಶಿವರಾತ್ರಿ ದಿನವೇ ಶಿವೈಕ್ಯಳಾದ 'ಲತಾ': ಹೃದಯಾಘಾತದಿಂದ ಧರ್ಮಸ್ಥಳದ ಆನೆ ವಿಧಿವಶ!

Shilpa D

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ನಿಧನ ಹೊಂದಿದೆ.

ಶಿವರಾತ್ರಿ ದಿನದಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಹೆಸರಿನ ಆನೆ ಮೃತಪಟ್ಟಿದೆ. ಆನೆ ಲತಾಗೆ 60 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಲತಾ ಮೃತಪಟ್ಟಿದೆ. ಕಳೆದ 50 ವರ್ಷಗಳಿಂದ ಆನೆ ಲತಾ ಶ್ರೀಕ್ಷೇತ್ರ ಧರ್ಮಸ್ಥಳದ ಸೇವೆಯಲ್ಲಿ ನಿರತವಾಗಿತ್ತು.

ಲತಾ ಸುಮಾರು 50 ವರ್ಷಗಳಿಂದ ಧರ್ಮಸ್ಥಳ ಜಾತ್ರಾಮಹೋತ್ಸವದಲ್ಲಿ ಗಾಂಭೀರ್ಯದ ಹೆಜ್ಜೆ ಹಾಕಿ ಭಕ್ತರ ಗಮನವನ್ನು ತನ್ನತ್ತ ಸೆಳೆಯುತ್ತಿತ್ತು. ಧರ್ಮಸ್ಥಳದಲ್ಲಿ ಪ್ರಸ್ತುತ ಲತಾ, ಲಕ್ಷ್ಮೀ ಹಾಗೂ ಶಿವಾನಿ ಎಂಬ ಹೆಸರಿನ ಆನೆಗಳಿದ್ದು, ಲತಾ ಸಾವಿನಿಂದ ಲಕ್ಷ್ಮೀ ಹಾಗೂ ಶಿವಾನಿ ಆನೆಗಳು ಮಂಕಾಗಿವೆ.

ಆನೆ ಸಾವಿನ ಸುದ್ದಿ ತಿಳಿದು ಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಲತಾಳ ಅಂತ್ಯ ಸಂಸ್ಕಾರ ನಡೆದಿದೆ.

SCROLL FOR NEXT