ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಗ್ಯಾರೇಜ್‌ನಲ್ಲಿ ಗ್ಯಾಸ್ ವೆಲ್ಡಿಂಗ್ ಟ್ಯಾಂಕ್ ಸ್ಫೋಟ, ನಾಲ್ವರಿಗೆ ಗಾಯ

ಗ್ಯಾರೇಜ್ ವೊಂದರಲ್ಲಿ ಗ್ಯಾಸ್ ವೆಲ್ಡಿಂಗ್ ಟ್ಯಾಂಕ್ ಸ್ಫೋಟಗೊಂಡು ಗ್ಯಾರೇಜ್ ಮಾಲೀಕ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಬಸವೇಶ್ವರನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಪೈ ಷೋರೂಮ್ ಬಳಿ ಶನಿವಾರ ಸಂಜೆ ನಡೆದಿದೆ.

ಬೆಂಗಳೂರು: ಗ್ಯಾರೇಜ್ ವೊಂದರಲ್ಲಿ ಗ್ಯಾಸ್ ವೆಲ್ಡಿಂಗ್ ಟ್ಯಾಂಕ್ ಸ್ಫೋಟಗೊಂಡು ಗ್ಯಾರೇಜ್ ಮಾಲೀಕ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಬಸವೇಶ್ವರನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಪೈ ಷೋರೂಮ್ ಬಳಿ ಶನಿವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಗ್ಯಾರೇಜ್ ನಲ್ಲಿ ಮಾಲೀಕ ಜಾರ್ಜ್, ಕೆಲಸಗಾರ ಶಿವು ಹಾಗೂ ಇಬ್ಬರು ಪಾದಚಾರಿ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಜಾರ್ಜ್ ಎಂಬುವವರು ಗ್ಯಾರೇಜ್ ನಡೆಸುತ್ತಿದ್ದಾರೆ. ಶನಿವಾರ ಸಂಜೆ ಕಾರೊಂದರ ವೆಲ್ಡಿಂಗ್ ಮಾಡುವಾಗ ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ಕ್ಷಣದಲ್ಲಿ ಬೆಂಕಿ ಗ್ಯಾಸ್ ವೆಲ್ಡಿಂಗ್ ಟ್ಯಾಂಕ್'ಗೆ ತಾಕಿ ಸ್ಫೋಟಗೊಂಡಿದೆ.

ಸ್ಫೋಟದ ರಭಸಕ್ಕೆ ಗ್ಯಾರೇಜ್ ಸೇರಿದಂತೆ ಸುತ್ತಮುತ್ತಲ ಹಲವು ಮನೆಗಳು ಹಾಗೂ ನಿರ್ಮಾಣ ಹಂತದ ಕಟ್ಟಡಕ್ಕೆ ಹಾನಿಯಾಗಿದೆ. ಈ ವೇಳೆ ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಹಾಗೂ ಇಬ್ಬರು ಪಾದಚಾರಿಗಳು ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಸ್ಫೋಟದ ವಿಚಾರ ತಿಳಿದು ಮಾಗಡಿ ರಸ್ತೆ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT