ಡಾ.ಎಂ.ಬಿ ಪುರಾಣಿಕ್ ಮತ್ತಿತರರು express
ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ, ಪಾಕ್ ಪರ ಘೋಷಣೆಗೆ ಕಾಂಗ್ರೆಸ್ ಸರ್ಕಾರದ ಮುಸ್ಲಿಂರ ಓಲೈಕೆಯೇ ಕಾರಣ- ವಿಹೆಚ್ ಪಿ

ಲ್ಲಿನ ಸಂಘನಿಕೇತನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಹೆಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತದ ಎರಡು ದಿನಗಳ ಪದಾಧಿಕಾರಿಗಳ ಬೈಠಕ್ ನಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮ ದತ್ತಿ ಕಾಯ್ದೆಗೆ ತಂದಿರುವ ತಿದ್ದುಪಡಿ ಮತ್ತು ಹಿಂದೂ ವಿರೋಧಿ ನೀತಿಗಳನ್ನು ಖಂಡಿಸಿ ಎರಡು ಅಂಶಗಳ ನಿರ್ಣಯವನ್ನು ಅಂಗೀಕರಿಸಿತು.

ಮಂಗಳೂರು: ಇಲ್ಲಿನ ಸಂಘನಿಕೇತನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಹೆಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತದ ಎರಡು ದಿನಗಳ ಪದಾಧಿಕಾರಿಗಳ ಬೈಠಕ್ ನಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮ ದತ್ತಿ ಕಾಯ್ದೆಗೆ ತಂದಿರುವ ತಿದ್ದುಪಡಿ ಮತ್ತು ಹಿಂದೂ ವಿರೋಧಿ ನೀತಿಗಳನ್ನು ಖಂಡಿಸಿ ಎರಡು ಅಂಶಗಳ ನಿರ್ಣಯವನ್ನು ಅಂಗೀಕರಿಸಿತು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯಾಧ್ಯಕ್ಷ ಡಾ.ಎಂ.ಬಿ.ಪುರಾಣಿಕ್, ದತ್ತಿ ಕಾಯ್ದೆಗೆ ತಿದ್ದುಪಡಿ ತಂದಿರುವುದು ಹಿಂದೂ ದೇವಾಲಯಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಹಿಡಿತ ಸಾಧಿಸುವ ಷಡ್ಯಂತ್ರ ಎಂದು ಬಣ್ಣಿಸಿದರು.

ದೇವಸ್ಥಾನದಿಂದ ಬರುವ ಆದಾಯವನ್ನು ದೇವಸ್ಥಾನದ ಸುತ್ತಮುತ್ತ ಮೂಲ ಸೌಕರ್ಯ ಕಲ್ಪಿಸಲು ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ದೇವಸ್ಥಾನಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದೆ.ಅದಕ್ಕೆ ದೇವಸ್ಥಾನದ ಹಣವನ್ನು ಬಳಸಬಾರದು.ಹಿಂದೂ ದೇವಸ್ಥಾನಗಳಿಂದ ಬರುವ ಆದಾಯವನ್ನು ಇತರ ಸಮುದಾಯಗಳ ಧಾರ್ಮಿಕ ಸಂಸ್ಥೆಗಳಿಗೆ ಬಳಸಬಾರದು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಿಂದೂ ಸಮಾಜವನ್ನು ಹತ್ತಿಕ್ಕಲು ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಮೊಳಗಿದ್ದು, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣವೇ ಕಾರಣ ಎಂದು ಆರೋಪಿಸಿದರು. ತರಗತಿಯಲ್ಲಿ ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗಾಗಿ ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿಯನ್ನು ಬಂಧಿಸದಿದ್ದಕ್ಕಾಗಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ವಿಎಚ್‌ಪಿ ಚಟುವಟಿಕೆಗಳನ್ನು 1 ಲಕ್ಷ ಹಳ್ಳಿಗಳಿಗೆ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.

ವಿಎಚ್‌ಪಿ ಸ್ಥಾಪನೆಯ 60 ವರ್ಷಗಳ ನೆನಪಿಗಾಗಿ ವಿಎಚ್‌ಪಿ ಚಟುವಟಿಕೆಗಳನ್ನು ರಾಷ್ಟ್ರದಾದ್ಯಂತ ಒಂದು ಲಕ್ಷ ಹಳ್ಳಿಗಳಿಗೆ ವಿಸ್ತರಿಸಲು ನಿರ್ಧರಿಸಿದ್ದೇವೆ ಎಂದು ವಿಎಚ್‌ಪಿಯ ರಾಷ್ಟ್ರೀಯ ಉಪ ಪ್ರಧಾನ ಕಾರ್ಯದರ್ಶಿ ಕೆ ಸ್ಥಾನುಮಲಯನ್ ಹೇಳಿದ್ದಾರೆ. ಪ್ರಸ್ತುತ, ವಿಎಚ್‌ಪಿಯು ದೇಶದ 63,000 ಹಳ್ಳಿಗಳಲ್ಲಿ ತನ್ನ ಅಸ್ತಿತ್ವವನ್ನು ಹೊಂದಿದೆ ಎಂದು ಅವರು ಹೇಳಿದರು. ತಮ್ಮ ಅಸ್ತಿತ್ವ ಕಡಿಮೆ ಇರುವ ತಮಿಳುನಾಡು, ಪಂಜಾಬ್ ಮತ್ತು ಈಶಾನ್ಯ ರಾಜ್ಯಗಳಲ್ಲಿ ತಮ್ಮ ನೆಲೆಯನ್ನು ಬಲಪಡಿಸುವತ್ತ ಗಮನ ಹರಿಸುವುದಾಗಿ ಅವರು ಹೇಳಿದರು.

ಹಿಂದೂ ಸಮಾಜವು ತಮ್ಮ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟು ರಾಷ್ಟ್ರೀಯ ಹಿತಾಸಕ್ತಿಯ ಕಾರಣಕ್ಕಾಗಿ ಚುನಾವಣೆಯಲ್ಲಿ 100 ಪ್ರತಿಶತ ಮತದಾನವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ದೇಶದಲ್ಲಿ ರಾಷ್ಟ್ರೀಯವಾದಿ ಮತ್ತು ಹಿಂದೂ ಪರವಾದ ಸರ್ಕಾರದ ಅವಶ್ಯಕತೆ ಇದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT