ನಟ ದರ್ಶನ್(ಸಂಗ್ರಹ ಚಿತ್ರ) 
ರಾಜ್ಯ

'ಸುಮಲತಾ ಅವರು ನಮ್ಮ ಅಮ್ಮ, ಅವರ ಜೊತೆ ನಾನು ಯಾವಾಗಲೂ ಇರುತ್ತೇನೆ': ನಟ ದರ್ಶನ್

ಮಂಗಳೂರಿನ ಉಳ್ಳಾಲ ಸಮೀಪದ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ್ದ ದರ್ಶನ್ ತೂಗುದೀಪ

ಮಂಗಳೂರು: ಸುಮಲತಾ ಅವರು ನಮ್ಮ ಅಮ್ಮ, ಅವರ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಹೇಳುವ ಮೂಲಕ ಈ ಬಾರಿ ಕೂಡ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಅಂಬರೀಷ್ ಪರ ಪ್ರಚಾರ ನಡೆಸುವುದಾಗಿ ನಟ ದರ್ಶನ್ ತಿಳಿಸಿದ್ದಾರೆ.

ಅವರು ಇಂದು ಮಂಗಳೂರಿನ ಉಳ್ಳಾಲ ಸಮೀಪದ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಹೆತ್ತ ತಾಯಿಯನ್ನು ಎಂದಾದರೂ ಹಿಟ್ಟು ಕೊಡಲಿಕ್ಕಾಗುತ್ತದೆಯೇ, ಮೊನ್ನೆಯವರೆಗೂ ಸುಮಲತಾ ಅಮ್ಮನ ಜೊತೆ ಇದ್ದೆ. ಈಗ ಅವರ ಕೈಬಿಟ್ಟರೆ ಆಗುತ್ತದೆಯೇ ಸರ್, ನಿಮ್ಮ ಮನೆಯಲ್ಲಿ ನಿಮ್ಮ ತಾಯಿಯನ್ನು ಬಿಟ್ಟು ಬಿಡುತ್ತೀರಾ, ಸುಮಲತಾ ಅಮ್ಮ ಅಮ್ಮನೇ ಸಾರ್ ಎಂದರು.

ಅಮ್ಮ ಅಮ್ಮನೇ ಅವಳೊಂದಿಗೆನೇ‌ ಇರೋದು. ಬೇರೆಯವರಿಗಾಗಿ ಅಮ್ಮನನ್ನು ಬಿಡೋಕಾಗುತ್ತಾ? ಎಂದು ಪ್ರಶ್ನಿಸಿದ್ದಾರೆ ದರ್ಶನ್. ಕುತ್ತಾರು ಕೊರಗಜ್ಜ ಕ್ಷೇತ್ರದ ಮಹಿಮೆ ಬಗ್ಗೆ ಎಲ್ಲರೂ ಹೇಳುತ್ತಿದ್ದರು. ಅದಕ್ಕೆ ಒಂದು ಬಾರಿ ಹೋಗಿ ಕೊರಗಜ್ಜನಲ್ಲಿ ಪ್ರಾರ್ಥನೆ ಮಾಡಿಕೊಂಡು ಬರೋಣವೆಂದು ಬಂದಿದ್ದೇನೆ, ಬೇರೇನು ಕಾರಣವಿಲ್ಲ ಎಂದಷ್ಟೇ ಹೇಳಿದರು. ದರ್ಶನ್ ಗೆ ನಟ ಚಿಕ್ಕಣ್ಣ ಹಾಗು ಯಶಸ್ ಸೂರ್ಯ ಸಾಥ್ ನೀಡಿದ್ದರು.

ಈ ಹಿಂದೆ ಮಾಲಾಶ್ರೀ, ಶಿವರಾಜ್​ಕುಮಾರ್, ನಟಿ ರಕ್ಷಿತಾ, ರಚಿತಾ ರಾಮ್, ಅವರು ಕೊರಗಜ್ಜನ ಸನ್ನಿಧಿಗೆ ಭೇಟಿ ಕೊಟ್ಟಿದ್ದರು. ಇತ್ತೀಚೆಗೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು ಹೆಚ್ಚಾಗಿ ಕುತ್ತಾರಿಗೆ ಭೇಟಿ ಕೊಡುತ್ತಿರುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT