ಡಿಸಿಎಂ ಡಿ.ಕೆ.ಶಿವಕುಮಾರ್‌ 
ರಾಜ್ಯ

'ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ, ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ': ಡಿಸಿಎಂ ಡಿ.ಕೆ.ಶಿವಕುಮಾರ್‌

ಹಾಲಿ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ.. ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಹಾಲಿ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ.. ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ.

ರಾಜ್ಯದ ನೀರಿನ ಬಿಕ್ಕಟ್ಟು ವಿಚಾರವಾಗಿ ಬಿಜೆಪಿ ಆರೋಪಗಳಿಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ‘ಬರಗಾಲ ಪರಿಸ್ಥಿತಿಯಲ್ಲಿ ನಮ್ಮ ಜನರಿಗೆ, ರೈತರಿಗೆ ನೀರು ಕೊಡಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ, ಜೆಡಿಎಸ್ ಮುಖಂಡರಿಗೆ ಬುದ್ಧಿ ಭ್ರಮಣೆಯಾಗಿದೆ’ ಎಂದು ಆರೋಪಿಸಿದರು.

‘ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದಿಲ್ಲ. ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸಲು ಆದ್ಯತೆ ನೀಡುತ್ತಿದ್ದೇವೆ. ಬಿಜೆಪಿ ಮುಖಂಡರು, ಎಚ್.ಡಿ.ದೇವೇಗೌಡರು ಮೊದಲು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ. ಬಳಿಕ ಕಾವೇರಿ ವಿಚಾರ ಮಾತನಾಡಲಿ’ ಎಂದು ಸವಾಲೆಸೆದರು.

‘ಬೆಂಗಳೂರು ಜನರಿಗೆ ಪೂರೈಸಲೆಂದೇ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ’ ಎಂದು ಸ್ಪಷ್ಟಪಡಿಸಿದ ಅವರು, ‘ಬಿಜೆಪಿ ತನ್ನ ತಪ್ಪು ಮುಚ್ಚಿಕೊಳ್ಳಲು ಜನರಿಗೆ ತಪ್ಪು ಸಂದೇಶ ನೀಡುತ್ತಿದೆ. ನಾವು ಈವರೆಗೂ ತಮಿಳುನಾಡು ಸರ್ಕಾರಕ್ಕೆ ಬಗ್ಗಿಲ್ಲ. ನಿರಂತರವಾಗಿ ಕಾನೂನು ಹೋರಾಟ ಮುಂದುವರಿಸಿದ್ದೇವೆ. ಆ ಮೂಲಕ ನಮ್ಮ ರೈತರು ಬೆಳೆದ ಬೆಳೆ ಉಳಿಸಿಕೊಳ್ಳಲು ನೀರು ಹರಿಸಿದ್ದೇವೆ. 66 ಟಿಎಂಸಿ ಅಡಿ ನೀರು ಸಂಗ್ರಹವಾಗುವ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಬಿಜೆಪಿಯುವರು ಅನುಮತಿ ಕೊಡಿಸಿದರೆ ತಮಿಳುನಾಡಿನವರು ಕೇಳಿದಾಗ ನೀರು ಕೊಡಬಹುದು’ ಎಂದರು.

ಮುಖಂಡರ ಆಕ್ರೋಶ

ಬೆಂಗಳೂರು ಜನರಿಗೆ ಕುಡಿಯುವ ನೀರು ಪೂರೈಸುವ ನೆಪದಲ್ಲಿ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದೆ ಎಂದು ಆರೋಪಿಸಿ ಸರ್‌ಎಂವಿ ಪ್ರತಿಮೆ ಎದುರು ರೈತ ಮುಖಂಡರು ಪ್ರತಿಭಟಿಸಿದರು. ಬೆಂಗಳೂರು–ಮೈಸೂರು ಹೆದ್ದಾರಿ ತಡೆದು, ಕಪ್ಪು ಬಾವುಟ ಪ್ರದರ್ಶಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂತೆಯೇ ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಭಾನುವಾರ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಗರಕ್ಕೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ ಇಲ್ನೋಡಿ, ಪುಡಿ ರೌಡಿಗಳ ಹಾವಳಿ : Parameshwar ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT