ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣ, ಇಬ್ಬರ ಹತ್ಯೆ

ನಗರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ರೌಡಿ ಶೀಟರ್ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಕಾಟನ್‌ಪೇಟೆ ಮತ್ತು ಬ್ಯಾಟರಾಯನಪುರ ಪೊಲೀಸ್‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು: ನಗರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ರೌಡಿ ಶೀಟರ್ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಕಾಟನ್‌ಪೇಟೆ ಮತ್ತು ಬ್ಯಾಟರಾಯನಪುರ ಪೊಲೀಸ್‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬ್ಯಾಟರಾಯನಪುರ ಪೊಲೀಸ್ ವ್ಯಾಪ್ತಿಯಲ್ಲಿ ಯೋಗೇಶ್ (23) ಎಂಬಾತನನ್ನು ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಮುನೇಶ್ವರ ಬ್ಲಾಕ್ ನಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಶುಕ್ರವಾರ ರಾತ್ರಿ 1.30ರ ಸುಮಾರಿಗೆ ದೇವರ ಉಥ್ಸದ ವೇಳೆ ಗಲಾಟೆ ನಡೆದಿದೆ. ಉತ್ಸವದ ತಮಟೆ ಶಬ್ಧಕ್ಕೆ ಕುಣಿಯುವಾಗ ಯುವಕರ ಮೈ ಮುಟ್ಟಿದ ಕಾರಣಕ್ಕೆ ಜಗಳವಾಗಿದೆ ಬಳಿಕ ಕೆಲವರು ಯೋಗೇಶ್'ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಮೃತ ಯೋಗೇಶ್ ಗಿರಿನಗರ ನಿವಾಸಿಯಾಗಿದ್ದು, ಬೈಕ್ ಸರ್ವೀಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದ. ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಹೂವಿನ ತೋಟದ ನಿವಾಸಿ ರೌಡಿ ಶೀಟರ್ ಶಿವ (35) ಎಂಬಾತನನ್ನು ಕಾಟನ್‌ಪೇಟೆ ಪೊಲೀಸ್ ವ್ಯಾಪ್ತಿಯ ಅವರ ಮನೆಯ ಸಮೀಪವೇ ಕೊಲೆ ಮಾಡಲಾಗಿದೆ.

ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಮನೆಗೆ ವಾಪಸಾಗುತ್ತಿದ್ದ ವೇಳೆ ಆತನಿಗಾಗಿಯೇ ಕಾದು ಕುಳಿತಿದ್ದ ದುಷ್ಕರ್ಮಿಗಳು ಕತ್ತು ಕೊಯ್ದು ಪರಾರಿಯಾಗಿದ್ದಾರೆ. ಹಳೆ ವೈಷಮ್ಯವೇ ಹತ್ಯೆಗೆ ಕಾರಣ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ