ವಾಹನಗಳಿಗೆ, ಎಪಿಎಂಸಿ ಕಚೇರಿಗೆ ಬೆಂಕಿ 
ರಾಜ್ಯ

ಬ್ಯಾಡಗಿ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ: ಆಕ್ರೋಶಗೊಂಡ ರೈತರಿಂದ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಪಟ್ಟಣದ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರ ಧ್ವಂಸಗೊಳಿಸಿ, ಕಲ್ಲುತೂರಾಟ ನಡೆಸಿದ್ದಾರೆ.

ಹಾವೇರಿ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಪಟ್ಟಣದ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರ ಧ್ವಂಸಗೊಳಿಸಿ, ಕಲ್ಲುತೂರಾಟ ನಡೆಸಿ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಸೋಮವಾರ ಸಂಜೆ ನಡೆದಿದೆ.

ಮೆಣಸಿನಕಾಯಿ ಬೆಲೆ ದಿಢೀರ್ ಇಳಿಕೆಯಾಗಿದ್ದರಿಂದ ರೊಚ್ಚಿಗೆದ್ದ ರೈತರು ಎಪಿಎಂಸಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ನಂತರ ಆವರಣದಲ್ಲಿ ನಿಂತಿದ್ದ ಎಪಿಎಂಸಿ ಅಧ್ಯಕ್ಷರ ಕಾರಿನ ಮೇಲೂ ಕಲ್ಲು ತೂರಿದ್ದಾರೆ. ಅಲ್ಲದೆ ಹಲವು ವಾಹನಗಳಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದುವರೆಗೆ 12 ವಾಹನಗಳನ್ನು ರೈತರು ಸುಟ್ಟು ಹಾಕಿದ್ದಾರೆ. 1 ಅಗ್ನಿಶಾಮಕ ವಾಹನ ಸಹ ಬೆಂಕಿಗೆ ಆಹುತಿ ಆಗಿದೆ. ಒಟ್ಟು 3 ಅಗ್ನಿಶಾಮಕ ವಾಹನ ಸ್ಥಳದಲ್ಲಿ ಇವೆ.

ರೈತರು ಮೆಣಸಿನಕಾಯಿಗೂ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ಮಾರ್ಕೆಟ್​ನಲ್ಲಿ ದಟ್ಟಹೊಗೆಯಿಂದ ಸಾರ್ವಜನಿಕರ ಉಸಿರಾಟಕ್ಕೆ ಸಮಸ್ಯೆ ಉಂಟಾಗಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ.

ಕಳೆದ ವಾರ ಪ್ರತಿ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 20 ಸಾವಿರ ರೂ. ಇತ್ತು. ಈಗ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 12 ಸಾವಿರ ರೂಪಾಯಿಗೆ ಕುಸಿದ ಹಿನ್ನೆಲೆಯಲ್ಲಿ ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿ ರೈತರು ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel