ಸಾಂದರ್ಭಿಕ ಚಿತ್ರ 
ರಾಜ್ಯ

ಕಲರ್ ಕಾಟನ್‌ ಕ್ಯಾಂಡಿ ಬ್ಯಾನ್; ಗೋಬಿ ಮಂಚೂರಿಗೆ ಕೃತಕ ಬಣ್ಣ ಬಳಸುವಂತಿಲ್ಲ; ಉಲ್ಲಂಘಿಸಿದರೆ 10 ಲಕ್ಷ ರು. ದಂಡ, 7 ವರ್ಷ ಶಿಕ್ಷೆ!

ಕರ್ನಾಟಕದಲ್ಲಿ ಕಲರ್‌ ಕಾಟನ್‌ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಿ ಸರ್ಕಾರ ಆದೇಶಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಕಲರ್‌ ಕಾಟನ್‌ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕಲರ್‌ ಕಾಟನ್‌ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಿ ಸರ್ಕಾರ ಆದೇಶಿಸಿದೆ.

ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಲರ್ ಕಾಟನ್​ ಕ್ಯಾಂಡಿ ಮಾರಾಟ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಲರ್ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ ಮಾದರಿಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಕಲಬೆರಕೆ ಕಲರ್ ಬಳಕೆ ಮಾಡೋದು ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ. ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ವಿವರ ನೀಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಮಾದರಿಗಳನ್ನು ಸಂಗ್ರಹಿಸಲಾಗಿತ್ತು.

ರಾಜ್ಯದಲ್ಲಿ 171 ಗೋಬಿ ಮಂಚೂರಿಯನ್‌ ಸ್ಯಾಂಪಲ್‌ ಸಂಗ್ರಹಿಸಿದ್ದು, ಅದರಲ್ಲಿ 107 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಪತ್ತೆಯಾದವು. ಟಾರ್‌ಟ್ರಾಸೈನ್‌ ಸನ್ಸೆಟ್‌ ಯೆಲ್ಲೋ‌ ಮತ್ತು ಕಾರ್ಮೋಸಿನ್‌ ಎಂಬ ರಾಸಾಯನಿಕಗಳು ಇದರಲ್ಲಿ ಕಂಡುಬಂದಿವೆ ಎಂದು ಸಚಿವರು ವಿವರಿಸಿದರು.

ಕಾಟನ್‌ ಕ್ಯಾಂಡಿಗೆ ಸಂಬಂಧಿಸಿದಂತೆ 25 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅದರಲ್ಲಿ 15ರಲ್ಲಿ ಕೃತಕ ಬಣ್ಣಗಳನ್ನು ಬಳಸಿರುವುದು ಪತ್ತೆಯಾಗಿದೆ. ಇದರಲ್ಲಿ ಕೂಡಾ ಟಾರ್‌ಟ್ರಾಸೈನ್‌ ಸನ್ಸೆಟ್‌ ಯೆಲ್ಲೋ‌ ಮತ್ತು ವಿಶೇಷವಾಗಿ ರೋಡಮೈನ್‌ ಬಿ ಬಳಸಲಾಗಿದೆ. ಕೃತಕ ಬಣ್ಣ ಬಳಕೆ ಮಾಡಿ ಕ್ಯಾಂಡಿ ತಯಾರು ಮಾಡಬಹುದು. ಆದರೆ ರೊಡಮೈನ್ ಬಿ, ಟಾರ್ಟ್ರಾಜಿನ್​ನಂತಹ ಯಾವುದೇ ಬಣ್ಣ ಬಳಸಬಾರದು. ಇದು ಆರೋಗ್ಯಕ್ಕೆ ಹಾನಿಕಾರಕ. ಇದು ಸಂಪೂರ್ಣ ಕಾನೂನು ಬಾಹಿರ. ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ. ಇನ್ಮುಂದೆ ಬಳಸುವಂತಿಲ್ಲ.

ಇದನ್ನು ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುವುದು ಎಂದರು.

ಗೋಬಿ ಮಂಚೂರಿಯಲ್ಲಿ ಟಾರ್ಟ್ರಾಸೈನ್ ಎಂಬ ಕೃತಕ ಬಣ್ಣಕಾರಕವನ್ನು ಬಳಸಲಾಗುತ್ತದೆ. ಹೀಗೆ ಬಣ್ಣ ಬಳಸಿದ ಗೋಬಿ ಮಂಚೂರಿಯನ್ನು ತಯಾರಿಸಬಾರದು. ಬಣ್ಣಕಾರಕಗಳನ್ನು ಬಳಸದ ಕ್ಯಾಂಡಿ ಮತ್ತು ಗೋಬಿ ಮಂಚೂರಿಗೆ ಅವಕಾಶವಿದೆ ಎಂದು ಅವರು ತಿಳಿಸಿದರು.

ಈ ನಡುವೆ ಚಿಕನ್‌ ಕಬಾಬ್‌ನಲ್ಲೂ ಕೆಲವರು ಬಣ್ಣಕಾರಕಗಳನ್ನು ಬಳಸುತ್ತಾರೆ. ಇದು ಕೂಡಾ ಅಪಾಯಕಾರಿ. ಆಹಾರ ಇಲಾಖೆಯ ಕಣ್ಣು ಇದರ ಮೇಲೂ ಬಿದ್ದಿದೆ. ಕಬಾಬ್ ಮಾದರಿಗಳನ್ನು ಆಗಲೇ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT