ಚೂರಿ ಇರಿತ 
ರಾಜ್ಯ

ಮೈಸೂರಿನಲ್ಲಿ ಮರ್ಯಾದಾ ಹತ್ಯೆ: ಯುವಕನಿಗೆ ಚೂರಿ ಇರಿತ, ಸ್ಥಿತಿ ಗಂಭೀರ

ತಮ್ಮ ಇಚ್ಛೆಗೆ ವಿರುದ್ಧವಾಗಿ ಪುತ್ರಿಯ ವಿವಾಹವಾಗಿದ್ದ ಯುವಕನಿಗೆ ಯುವತಿಯ ಪೋಷಕರು ಹಾಗೂ ಸಂಬಂಧಿಕರು ದೈಹಿಕ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿರುವ ಘಟನೆಯೊಂದು ಶ್ರೀರಂಗಪಟ್ಟಣದ ಮೇಳಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೈಸೂರು: ತಮ್ಮ ಇಚ್ಛೆಗೆ ವಿರುದ್ಧವಾಗಿ ಪುತ್ರಿಯ ವಿವಾಹವಾಗಿದ್ದ ಯುವಕನಿಗೆ ಯುವತಿಯ ಪೋಷಕರು ಹಾಗೂ ಸಂಬಂಧಿಕರು ದೈಹಿಕ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿರುವ ಘಟನೆಯೊಂದು ಶ್ರೀರಂಗಪಟ್ಟಣದ ಮೇಳಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೈಸೂರು ತಾಲ್ಲೂಕು ಕುರುಬಾರಹಳ್ಳಿಯ ಮಂಜುನಾಥ್‌ ಅವರ ಮಗ ಶಶಾಂಕ್‌ ಮೇಲೆ ಮೈಸೂರಿನ ಜೆ.ಪಿ. ನಗರದ ಆನಂದ್‌ ಮತ್ತು ಇತರರ ತಂಡ ಚೂರಿಯಿಂದ ಇರಿದಿದೆ.

ಘಟನೆಯಲ್ಲಿ ಶಶಾಂಕ್‌ನ ಕರುಳು ಹೊರ ಬಂದಿದ್ದು ಆತನ ಸ್ಥಿತಿ ಗಂಭೀರವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಡಿವಾಳ ಜಾತಿಯ ಶಶಾಂಕ್‌ ಮತ್ತು ಕುರುಬ ಜಾತಿಯ 19 ವರ್ಷದ ಯುವತಿ ಪರಸ್ಪರ ಪ್ರೀತಿಸಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದರು. ಯುವತಿಗೆ ಬೇರೊಬ್ಬ ಯುವಕನ ಜತೆ ಮದುವೆ ನಿಶ್ಚಯವಾಗಿತ್ತು. ವಿಚಾರ ತಿಳಿದ ಶಶಾಂಕ್ ಯುವತಿ ತನ್ನೊಂದಿಗೆ ಕರೆದುಕೊಂಡು ಹೋಗಿ ದೇವಸ್ಥಾನದಲ್ಲಿ ವಿವಾಹ ಮಾಡಿಕೊಂಡಿದ್ದ.

ದಂಪತಿ ಮೇಳಾಪುರ ಗ್ರಾಮದಲ್ಲಿ ವಾಸವಾಗಿರುವ ವಿಚಾರ ತಿಳಿದ ಅನುಷ್ಕಾ ಪೋಷಕರು ಹಾಗೂ ಸಂಬಂಧಿಕರು ಮನೆಗೆ ನುಗ್ಗಿ ಶಶಾಂಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಆತನ ಹೊಟ್ಟೆ ಹಾಗೂ ಇತರೆ ಭಾಗಗಳಿಗೆ ಚೂರಿಯಿಂದ ಇರಿದ್ದಾರೆ. ಘಟನೆ ಸಂಬಂಧ ಯುವತಿ ಅನುಷ್ಕಾ ತಂದೆ ಆನಂದ್ ಸೇರಿ 13 ಮಂದಿ ವಿರುದ್ಧ ದೂರು ದಾಖಲಿಸಿದ್ದು, ದೂರು ಆಧರಿಸಿ 8 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಸಿತ್ ಕೇರಳಂ'ಗೆ ಚಾಲನೆ

SCROLL FOR NEXT