ಸಿದ್ದರಾಮಯ್ಯ
ಸಿದ್ದರಾಮಯ್ಯ 
ರಾಜ್ಯ

ಸಿಎಎ ಅಧಿಸೂಚನೆ ಹೊರಡಿಸಿರುವುದು 'ಗಿಮಿಕ್', ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

Ramyashree GN

ಉಡುಪಿ: ಕೇಂದ್ರ ಸರ್ಕಾರವು ಪೌರತ್ವ (ತಿದ್ದುಪಡಿ) ಕಾಯ್ದೆಯ ಅಧಿಸೂಚನೆ ಹೊರಡಿಸಿರುವುದು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ 'ಗಿಮಿಕ್' ಆಗಿದ್ದು, ಕರ್ನಾಟಕದಲ್ಲಿ ಅದರ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

ಕೇಂದ್ರವು ಸೋಮವಾರ ಪೌರತ್ವ (ತಿದ್ದುಪಡಿ) ಕಾಯ್ದೆ, 2019 ರ ಅನುಷ್ಠಾನವನ್ನು ಘೋಷಿಸಿತು. ವಿವಾದಾತ್ಮಕ ಕಾನೂನನ್ನು ಅಂಗೀಕರಿಸಿದ ನಾಲ್ಕು ವರ್ಷಗಳ ಅನುಷ್ಠಾನಗೊಳಿಸುತ್ತಿದ್ದು, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದೇಶಕ್ಕೆ ಬಂದಿರುವ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುತ್ತದೆ.

'ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈಗ ಸಿಎಎ ಅನ್ನು ಜಾರಿಗೆ ತರಲಾಗುತ್ತಿದೆ. ಅವರು (ಕೇಂದ್ರ) ಇಷ್ಟು ವರ್ಷ ಏಕೆ ಮೌನವಾಗಿದ್ದರು? ಈಗ ಅವರು ಚುನಾವಣೆಗೆ ಮುಂಚಿತವಾಗಿ ಇದ್ದಕ್ಕಿದ್ದಂತೆ ಅದನ್ನು ತಂದಿದ್ದಾರೆ. ಚುನಾವಣೆಯಲ್ಲಿ ಸೋಲುವ ಭಯದಿಂದ ಈ ಎಲ್ಲ ಗಿಮಿಕ್‌ಗಳನ್ನು ಮಾಡುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

'ನಾವು ಅದನ್ನು ಇನ್ನೂ ಪರಿಶೀಲಿಸಬೇಕಾಗಿದೆ. ಅದನ್ನು ಪರಿಶೀಲಿಸಿದ ನಂತರ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ' ಎಂದರು.

ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ ಅವರು, ರಾಜ್ಯದಲ್ಲಿ ಸಿಎಎ ಅನುಷ್ಠಾನದ ವಿಷಯವನ್ನು ಸರ್ಕಾರವು ಇನ್ನೂ ಚರ್ಚಿಸಿಲ್ಲ ಮತ್ತು ಸಚಿವ ಸಂಪುಟದಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.

SCROLL FOR NEXT