ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹೋಟೆಲ್ ನಲ್ಲಿ ವಿದೇಶಿ ಮಹಿಳೆ ಶವವಾಗಿ ಪತ್ತೆ; ಉಸಿರುಗಟ್ಟಿಸಿ ಕೊಲೆ?

ವಿದೇಶಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಹಂತಕರು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಉಜ್ಬೇಕಿಸ್ತಾನ ಮೂಲದ ಜರೀನಾ ಮೃತ ಮಹಿಳೆ.

ಬೆಂಗಳೂರು: ನಗರದ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬಿಡಿಎ ಕಚೇರಿ ಬಳಿಯ ತ್ರಿಸ್ಟಾರ್ ಹೋಟೆಲ್‌ನಲ್ಲಿ ಉಜ್ಬೇಕಿಸ್ತಾನ್ ಮೂಲದ 37 ವರ್ಷದ ಮಹಿಳೆ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಂತ್ರಸ್ತೆ ಟೂರಿಸ್ಟ್ ವೀಸಾದಲ್ಲಿ ಬಂದಿದ್ದರು ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಹೋಟೆಲ್‌ನಲ್ಲಿ ರೂಂ ಬಾಡಿಗೆಗೆ ಪಡೆದಿದ್ದರು.

ಸಂತ್ರಸ್ತೆಯನ್ನು ಕತ್ತು ಹಿಸುಕಿ ಅಥವಾ ಉಸಿರುಗಟ್ಟಿಸಿ ಸಾಯಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕೊಲ್ಲುವ ಮೊದಲು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆಯನ್ನು ಪೊಲೀಸರು ತಳ್ಳಿಹಾಕಿಲ್ಲ. ಸಂತ್ರಸ್ತೆಯನ್ನು ಜರೀನಾ ಎಂದು ಪೊಲೀಸರು ಗುರುತಿಸಿದ್ದಾರೆ.

ಬುಧವಾರ ಸಂತ್ರಸ್ತೆ ತನ್ನ ಕೋಣೆಯಿಂದ ಹೊರಗೆ ಬಾರದಿದ್ದಾಗ ಮಧ್ಯಾಹ್ನ 4.30ರ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಸಂಜೆ ಹೋಟೆಲ್ ಸಿಬ್ಬಂದಿ ಎಷ್ಟೇ ಕೂಗಿದ್ರು ಮಹಿಳೆಯಿಂದ ಉತ್ತರ ಬರಲಿಲ್ಲ. ಹೀಗಾಗಿ ಮಾಸ್ಟರ್ ಕೀ ಮೂಲಕ ಬಾಗಿಲು ತೆಗೆದಾಗ ಮಹಿಳೆ ಶವಪತ್ತೆಯಾಗಿದೆ.

ಸಂತ್ರಸ್ತೆ ದೇಹದ ಮೇಲಿನ ಗಾಯಗಳು ಆಕೆಯ ಮೇಲೆ ದಾಳಿ ನಡೆದಿರಬೇಕು ಎಂದು ಸೂಚಿಸುತ್ತದೆ. ಆರೋಪಿ ಸಂತ್ರಸ್ತೆಗೆ ಪರಿಚಯವಿರಬಹುದು ಎಂದು ಶಂಕಿಸಲಾಗಿದೆ.

ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಪೊಲೀಸರು ಹೋಟೆಲ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಹಾಗು ಹೋಟೆಲ್‌ನ ಸಂದರ್ಶಕರು ಮತ್ತು ಅತಿಥಿಗಳ ರಿಜಿಸ್ಟರ್‌ಗಳನ್ನು ಸಹ ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT