ಡಾ ಜಿ ಪರಮೇಶ್ವರ್ 
ರಾಜ್ಯ

ಯಡಿಯೂರಪ್ಪ ವಿರುದ್ಧ ದೂರು: ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ಸಿಕ್ಕಿದ್ದು, ತನಿಖೆ ನಡೆಸುತ್ತೇವೆ!

ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಾರೆ ಎಂದ ಗೃಹಸಚಿವರು

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ನಿನ್ನೆ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ. ಇದೊಂದು ಸೂಕ್ಷ್ಮ ವಿಚಾರವಾಗಿರುವುದರಿಂದ ಗೃಹ ಇಲಾಖೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ತನಿಖೆ ಮಾಡುತ್ತೇವೆ. ತನಿಖೆ ಆಗುವವರೆಗೆ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದಿದ್ದಾರೆ.

ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ. ಇದೊಂದು ಸೂಕ್ಷ್ಮ ವಿಚಾರ. ಇದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಸಿಎಂಗೆ ಸಂಬಂಧಿಸಿದ್ದು. ಪೊಲೀಸರು ದೂರು ತೆಗೆದುಕೊಂಡು ತನಿಖೆ ಆರಂಭಿಸಿದ್ದಾರೆ, ತನಿಖೆ ಪೂರ್ಣಗೊಳ್ಳುವವರೆಗೆ, ಎಚ್ಚರಿಕೆಯಿಂದ ಮಾತನಾಡಬೇಕಾಗುತ್ತದೆ ಎಂದರು.

ಮಹಿಳೆ ಮತ್ತು ಅವರ ಮಗಳಿಗೆ ಪೊಲೀಸರು ರಕ್ಷಣೆ ನೀಡುತ್ತಾರೆಯೇ ಎಂದು ಕೇಳಿದಾಗ, ಗೃಹ ಸಚಿವರು ಈಗ ಅದು ಅಗತ್ಯವಿಲ್ಲ ಎಂದು ಹೇಳಿದರು. ಅಗತ್ಯವಿದ್ದರೆ, ಪೊಲೀಸರು ಮಹಿಳೆಗೆ ರಕ್ಷಣೆ ನೀಡುತ್ತಾರೆ, ಕೇಸು ದಾಖಲು ಹಿಂದೆ ಯಾವುದೇ ರಾಜಕೀಯ ಪ್ರೇರಣೆ ಕೃತ್ಯಗಳಿಲ್ಲ ಎಂದರು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಇದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲಿ, ವಿಚಾರ ಗೊತ್ತಾಯಿತು ಅಷ್ಟೆ. ಗೃಹ ಸಚಿವರು ಮತ್ತು ಪೊಲೀಸ್ ಇಲಾಖೆ ತನಿಖೆ ಮಾಡಲು ಸಮರ್ಥರಿದ್ದಾರೆ ಅವರು ನೋಡಿಕೊಳ್ಳುತ್ತಾರೆ ಎಂದರು.

ಎಫ್ ಐಆರ್ ನಲ್ಲಿ ಏನಿದೆ?: ಯಡಿಯೂರಪ್ಪ ವಿರುದ್ಧ ಆಪಾದಿತ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸಲ್ಲಿಸಿರುವ ದೂರಿನಲ್ಲಿ, ಫೆಬ್ರವರಿ 2 ರಂದು ಸಹಾಯ ಪಡೆಯಲು ಸಂತ್ರಸ್ತ ಮಹಿಳೆ ಹೋಗಿದ್ದ ವೇಳೆ 17 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಎಫ್‌ಐಆರ್ ನಲ್ಲಿ ಆರೋಪಿಸಲಾಗಿದೆ. ಯಡಿಯೂರಪ್ಪನವರು ಬಾಲಕಿಯನ್ನು ಮನೆಯ ಕೋಣೆಯೊಂದಕ್ಕೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಹಲ್ಲೆಯ ನಂತರ, ಸಂತ್ರಸ್ತೆ ಕೋಣೆಯಿಂದ ಹೊರಗೆ ಓಡಿಹೋಗಿ ಘಟನೆಯ ಬಗ್ಗೆ ತನ್ನ ತಾಯಿಗೆ ತಿಳಿಸಿದ್ದಾಳೆ ಎಂದು ಆರೋಪ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT