ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 
ರಾಜ್ಯ

BSY ವಿರುದ್ಧ ಪೋಕ್ಸೋ ಪ್ರಕರಣ: ವಿನಾಕಾರಣ ತೇಜೋವಧೆ ಮಾಡುವುದು ಸರಿಯಲ್ಲ‌; ಸಚಿವ ದಿನೇಶ್ ಗುಂಡೂರಾವ್

Manjula VN

ಹುಬ್ಬಳ್ಳಿ: ವಿನಾಕಾರಣ ಒಬ್ಬರ ತೇಜೋವಧೆ ಮಾಡುವುದು ಸರಿಯಲ್ಲ ಪ್ರಕರಣ ದಾಖಲಾದ ಕೂಡಲೇ ದೋಷಿ, ನಿರ್ದೋಷಿ ಎಂದು ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಶುಕ್ರವಾರ ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣದ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಸರಿಯಾಗಿ ತನಿಖೆಯಾಗಬೇಕು. ವಿನಾಕಾರಣ ಯಾರನ್ನೂ ತೇಜೋವಧೆ ಮಾಡುವುದು ಸರಿಯಲ್ಲ‌ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದು ಖಚಿತ. ಇದೀಗ ಸಿಎಎ ತೆಗೆದುಕೊಂಡು ಬಂದಿದ್ದಾರೆ. ಕಳೆದ 10 ವರ್ಷದಲ್ಲಿ ಇವರ ಅಭಿವೃದ್ಧಿ ಶೂನ್ಯ. ಹೀಗಾಗಿಯೇ ಚುನಾವಣೆ ಸಂದರ್ಭದಲ್ಲಿ ಇಂತಹ ವಿಷಯಗಳನ್ನು ತಂದು ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆಂದು ಕಿಡಿಕಾರಿದರು.

ಮೋದಿ ಅವರು ಪ್ರಧಾನಿ ಆಗುವರೆಗೂ ದೇಶ ಇರಲಿಲ್ಲವೋ ಅಥವಾ ದೇಶದಲ್ಲಿ ಅಭಿವೃದ್ಧಿ ಆಗಿರಲಿಲ್ಲವೋ? ಇದೀಗ ಸ್ವರ್ಗ ಆಗಿದೆಯಾ? ಸುಮ್ಮನೆ ಜನರಿಗೆ ಮಂಕು ಬೂದಿ ಎರಚಿದ್ದಾರೆ. ಇದೀಗ ಬಹುತೇಕರಿಗೆ ಇವರ ನಿಜವಾದ ಬಣ್ಣ ಗೊತ್ತಾಗಿದೆ‌. ನಾವು ಹೇಳಿದಂತೆ ಮಾಡಿದ್ದೇವೆ. ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ಬಿಜೆಪಿ ಸಂಸದರು ನಮ್ಮ ಪಕ್ಷದ ಅಧ್ಯಕ್ಷರ ಜೊತೆಗೆ ಸಂಪರ್ಕದಲ್ಲಿರಬಹುದು. ಈ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ತಿಳಿಸಿದರು.

ದೇಶದ ಜನರ ಬಗ್ಗೆ ಇವರಿಗೆ ಕಾಳಜಿಯಿದ್ದರೆ 1000 ರೂ. ದರ ಇಳಿಸಬೇಕಿತ್ತು. ಸಿಕ್ಕಾಪಟ್ಟೆ ದರ ಏರಿಸಿ ಈಗ 100 ರೂ. ಇಳಿಸಿದ್ದಾರೆ. ಇದು ಚುನಾವಣಾ ಗಿಮಿಕ್ ವಿನಃ ಜನರ ಕಾಳಜಿಯಿಲ್ಲ. ಪ್ರಧಾನಿ ಮೋದಿಯವರಿಗೆ ನೈತಿಕತೆಯಿದ್ದರೆ 1000 ರೂ. ಇಳಿಸಬೇಕು ಎಂದರು.

ರಾಜ್ಯದಲ್ಲಿ ಕಾಟನ್ ಕ್ಯಾಂಡಿ ನಿಷೇಧ ಕುರಿತು ಇಗಾಗಲೇ ಮಾಹಿತಿ ಕೊಟ್ಟಿದ್ದೇವೆ. ಕಲರ್ ಬಳಸಬಾರದು ಎಂದು ಹೇಳಲಾಗಿದೆ. ಈ ವಿಚಾರದಲ್ಲಿ ಜನರು ಕೂಡ ಜಾಗೃತರಾಗಬೇಕು. ಒಂದು ವೇಳೆ ನಿಷೇಧಿತ ಬಣ್ಣ ಬಳಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

SCROLL FOR NEXT