ಹೈಕೋರ್ಟ್ 
ರಾಜ್ಯ

ಪಾಕ್ ಪರ ಘೋಷಣೆ ಪ್ರಕರಣ: ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಅವರು ಜಯಗಳಿಸಿದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ...

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಅವರು ಜಯಗಳಿಸಿದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಂಧಿತರಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ ಎಸ್‌ ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ ವಿಜೇತ್‌ ಪುರಸ್ಕರಿಸಿದ್ದಾರೆ.

ಆರೋಪಿಗಳು ರೂ.1 ಲಕ್ಷ ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು, ಆರೋಪಿಗಳು ದೇಶ ಬಿಟ್ಟು ಹೋಗಬಾರದು, ವಿಚಾರಣಾಧೀನ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಮತ್ತು ಇಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು, ಪೊಲೀಸರು ಪ್ರಕರಣ ದಾಖಲಿಸುವ ಮುನ್ನ ಪೂರ್ವಾನುಮತಿ ಪಡೆದಿಲ್ಲ. ಆರೋಪಿಗಳಿಗೆ ಸಿಆರ್‌ಪಿಸಿ ಸೆಕ್ಷನ್‌ 41ರ ಅನ್ವಯ ನೋಟಿಸ್‌ ನೀಡಿಲ್ಲ. ಅಂತೆಯೇ, ಆರೋಪಿಸಲಾದ ಘೋಷಣೆಯ ಮಾದರಿಯನ್ನು ಧ್ವನಿ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹೀಗಾಗಿ, ಇದು ಮೇಲ್ನೋಟಕ್ಕೆ ಸಾಕ್ಷ್ಯವೇ ಇಲ್ಲದ ಪ್ರಕರಣ ಎಂಬುದು ಸಾಬೀತಾಗುತ್ತದೆ ಎಂಬ ಅಂಶಗಳನ್ನು ಪರಿಗಣಿಸಿ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಏನಿದು ಪ್ರಕರಣ?

ಕಳೆದ ತಿಂಗಳ 27ರಂದು ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಗೆ ಮತದಾನ ನಡೆದಿತ್ತು. ಫಲಿತಾಂಶ ಪ್ರಕಟವಾದ ಬಳಿಕ, ವಿಜೇತ ಅಭ್ಯರ್ಥಿ ನಾಸೀರ್‌ ಹುಸೇನ್‌ ಪರ ಸಂಭ್ರಮಾಚರಿಸುವ ವೇಳೆ ಆರೋಪಿಗಳು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ ಎಂದು ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT