ರಾಜೀವ್ ಕುಮಾರ್
ರಾಜೀವ್ ಕುಮಾರ್  
ರಾಜ್ಯ

ಲೋಕಸಭೆ ಚುನಾವಣೆ ಜತೆಗೆ ಸುರಪುರ ಉಪ ಚುನಾವಣೆ ಘೋಷಣೆ; ಮೇ 7 ರಂದು ಮತದಾನ

Lingaraj Badiger

ಬೆಂಗಳೂರು: ಲೋಕಸಭೆ ಚುನಾವಣೆಯ ಜೊತೆಗೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಕೇಂದ್ರ ಚುನಾವಣಾ ಆಯೋಗ ಶನಿವಾರ ಉಪ ಚುನಾವಣೆ ಘೋಷಿಸಿದ್ದು, ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

ಇಂದು ದೆಹಲಿಯ ವಿಜ್ಞಾನಭವನದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು,

ಲೋಕಸಭಾ ಚುನಾವಣೆ ಜೊತೆಯಲ್ಲಿ ದೇಶದ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಈ 26 ವಿಧಾನಸಭಾ ಕ್ಷೇತ್ರಗಳ ಪೈಕಿ ಕರ್ನಾಟಕದ ಸುರಪುರ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರ ಅಕಾಲಿಕ ನಿಧನದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಮೇ 7 ರಂದು ಉಪ ಚುನಾವಣೆ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ದೇಶದ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ

ರಾಜಾ ವೆಂಕಟಪ್ಪ ನಾಯಕ್ ಪುತ್ರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸೋತಿದ್ದ ರಾಜು ಗೌಡ (ನರಸಿಂಹ ನಾಯಕ್) ಅವರೇ ಮತ್ತೆ ಕಮಲ ಚಿಹ್ನೆ ಅಡಿಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಾ ವೆಂಕಟಪ್ಪ ನಾಯಕ್ ಅವರು ಕಳೆದ ಫೆಬ್ರವರಿ 25ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರನ್ನು ಈ ಬಾರಿ ಉಗ್ರಣ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ನಡೆಯಲಿದೆ ಮತ್ತು ಉತ್ತರ ಕರ್ನಾಟಕದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಹೇಳಿದ್ದಾರೆ.

SCROLL FOR NEXT