ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ 
ರಾಜ್ಯ

ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಕಾಂಗ್ರೆಸ್ ನ ಒಳಸಂಚು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಒಳಸಂಚು ಅಡಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶುಕ್ರವಾರ ಹೇಳಿದರು.

ಹುಬ್ಬಳ್ಳಿ: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಒಳಸಂಚು ಅಡಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ವಯಸ್ಸೇನು, ಅವರ ಹಿರಿತನವೇನು, ಅವರ ಸ್ಥಾನಮಾನವೇನು, ಅವರ ವಿರುದ್ಧ ಈ ರೀತಿ ಷಡ್ಯಂತ್ರ ಮಾಡುವುದು ಎಂದರೆ ಎಂಥಾ ಅನ್ಯಾಯವಿದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಒಬ್ಬ ಪ್ರಭಾವಿ, ಹಿರಿಯ ರಾಜಕಾರಣಿ ಮೇಲೆ ಈ ರೀತಿ ಸುಳ್ಳು ದೂರು ದಾಖಲಿಸುವುದು ನಿಜಕ್ಕೂ ಅಕ್ಷಮ್ಯ, ಈ ಸಂಬಂಧ ಕಾನೂನು ರೀತಿ ತನಿಖೆ ಆಗುತ್ತದೆ. ಅವರು ಇದರಿಂದ ಹೊರಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶಾದ್ಯಂತ ಎಲ್ಲಾ ಯುವ ಮತದಾರರು ಪ್ರಧಾನಿ ಮೋದಿಯವರ ಅಭಿಮಾನಿಗಳಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಾರೆಂಬ ವಿಶ್ವಾಸವಿದೆ. ಶೇ 90ರಷ್ಟು ಹೊಸ ಮತದಾರರಲ್ಲಿ ಮೋದಿಗೆ ಅಪಾರ ಅನುಯಾಯಿಗಳೂ ಇದ್ದಾರೆ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?