ಹೈಕೋರ್ಟ್, ಡಿಕೆಶಿ ಸಾಂದರ್ಭಿಕ ಚಿತ್ರ 
ರಾಜ್ಯ

204 ರೂ. ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣ: ಬೆಂಗಳೂರಿಗೆ ವರ್ಗಾವಣೆ ಕೋರಿ ಯತ್ನಾಳ್‌ ಮನವಿ, ಡಿಕೆಶಿಗೆ 'ಹೈ' ನೋಟಿಸ್‌

ತಮ್ಮ ವಿರುದ್ಧ ದಾಖಲಾಗಿರುವ ರೂ.204 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮನವಿ ಮಾಡಿಕೊಂಡಿದ್ದು, ಈ ಸಂಬಂಧ ಹೈಕೋರ್ಟ್ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ರೂ.204 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮನವಿ ಮಾಡಿಕೊಂಡಿದ್ದು, ಈ ಸಂಬಂಧ ಹೈಕೋರ್ಟ್ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಬಸನಗೌಡ ಪಾಟೀಲ್‌ ಅವರು ಸಲ್ಲಿಸಿರುವ ಸಿವಿಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.‌ ರಾಮನಗರ ಜಿಲ್ಲೆಯ ಕನಕಪುರದ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿಯಲ್ಲಿ ಬಾಕಿರುವ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಲಾಗಿದೆ.

ವಾದ ಆಲಿಸಿದ ಪೀಠವು ಪ್ರತಿವಾದಿ ಡಿ ಕೆ ಶಿವಕುಮಾರ್‌ ಅವರಿಗೆ ತುರ್ತು ನೋಟಿಸ್‌ ಜಾರಿ ಮಾಡಿದೆ. ಶಿವಕುಮಾರ್‌ ಹಾಗೂ ವಿಚಾರಣಾಧೀನ ನ್ಯಾಯಾಲಯದಲ್ಲಿ ಅವರ ಪರವಾಗಿ ಹಾಜರಾಗುವ ವಕೀಲರಿಗೆ ಹ್ಯಾಂಡ್‌ ಸಮನ್ಸ್‌ ಮೂಲಕ ನೋಟಿಸ್‌ ನೀಡಲು ಅನುಮತಿಸಿರುವ ಪೀಠವು, ವಿಚಾರಣೆಯನ್ನಯ ಮಾರ್ಚ್‌ 20ಕ್ಕೆ ಮುಂದೂಡಿದೆ.

ತಮಗೆ ಕಿರುಕುಳ ನೀಡುವ ಉದ್ದೇಶದಿಂದ ಡಿ ಕೆ ಶಿವಕುಮಾರ್‌ ಅವರು ಕನಕಪುರದ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿಯಲ್ಲಿ ದಾವೆ ಹೂಡಿದ್ದಾರೆ. ತಾನು ವಿಜಯಪುರದ ಶಾಸಕನಾಗಿದ್ದು, ವಿಜಯಪುರ- ಕನಕಪುರದ ನಡುವಿನ ಅಂತರ 565 ಕಿ ಮೀ. ಹೀಗಾಗಿ, ಪ್ರಕರಣವನ್ನು ಕನಕಪುರದಿಂದ ಬೆಂಗಳೂರಿಗೆ ವರ್ಗಾಯಿಸಬೇಕು. ತಾನು ಕನಕಪುರಕ್ಕೆ ಭೇಟಿ ನೀಡಿದರೆ ತನ್ನ ಮೇಲೆ ದಾಳಿಯಾಗುವ ಸಂಭವವಿದೆ. 2008ರಿಂದ ಡಿ ಕೆ ಶಿವಕುಮಾರ್‌ ಅವರು ಕನಕಪುರದ ಶಾಸಕರಾಗಿದ್ದು, ಸಾಕ್ಷಿ ತಿರುಚುವ ಸಾಧ್ಯತೆ ಇದೆ. ತಾನು ವಿಜಯಪುರದಲ್ಲಿ ಹೇಳಿಕೆ ನೀಡಿದ್ದು, ಕನಕಪುರದಲ್ಲಿ ದಾವೆ ಹೂಡಲಾಗಿದೆ. ಹೀಗಾಗಿ, ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಬೇಕು” ಎಂದು ಯತ್ನಾಳ್‌ ಕೋರಿದ್ದಾರೆ.

ಏನಿದು ಪ್ರಕರಣ?

ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರವಿದ್ದ ಸಂದರ್ಭದಲ್ಲಿ 2019ರ ಜೂನ್‌ 23ರಂದು ವಿಜಯಪುರದಲ್ಲಿ ಯತ್ನಾಳ್‌ ಅವರು ಡಿ ಕೆ ಶಿವಕುಮಾರ್‌ ಅವರು ನಮ್ಮ (ಬಿಜೆಪಿ) ನಾಯಕರನ್ನು ಭೇಟಿ ಮಾಡಿ ತಮ್ಮ ವಿರುದ್ಧದ ಆದಾಯ ತೆರಿಗೆ ಇಲಾಖೆ ಪ್ರಕರಣಗಳಿಂದ ರಕ್ಷಣೆ ಕೊಡಿಸುವಂತೆ ಕೋರಿದ್ದಾರೆ. ಈ ಸಂಬಂಧ ಡಿ ಕೆ ಶಿವಕುಮಾರ್‌ ಅವರು ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದಾರೆ. ವಿವಿಧ ಮೂಲಗಳ ಮೂಲಕ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಒತ್ತಡ ಹೇರಲು ಡಿ ಕೆ ಶಿವಕುಮಾರ್‌ ಪ್ರಯತ್ನಿಸಿದ್ದಾರೆ ಎಂಬುದು ನನಗೆ ತಿಳಿದಿದೆ. ತಮ್ಮ ವಿರುದ್ಧದ ಜಾರಿ ನಿರ್ದೇಶನಾಲಯದ ಪ್ರಕರಣಗಳನ್ನು ಮುಕ್ತಾಯಗೊಳಿಸಿದರೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲು ತಮ್ಮ ವಿರೋಧ ಇಲ್ಲ ಎಂದು ಡಿ ಕೆ ಶಿವಕುಮಾರ್‌ ಹೇಳಿದ್ದಾರೆ ಎಂಬುದು ನನಗೆ ಗೊತ್ತಿದೆ” ಎಂದು ಹೇಳಿದ್ದನ್ನು ಮಾಧ್ಯಮಗಳು ವ್ಯಾಪಕವಾಗಿ ಪ್ರಸಾರ ಮಾಡಿದ್ದವು.

ಈ ಹೇಳಿಕೆಯನ್ನು ಆಧರಿಸಿ ಡಿ ಕೆ ಶಿವಕುಮಾರ್‌ ಅವರು ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯದಲ್ಲಿ ಯತ್ನಾಳ್‌ ವಿರುದ್ಧ ದಾವೆ ಹೂಡಿದ್ದು, ತಮ್ಮ ಘನತೆ ಮತ್ತು ವರ್ಚಸ್ಸಿಗೆ ಹಾನಿಯಾಗಿದೆ. ಇದಕ್ಕಾಗಿ ರೂ,204 ಕೋಟಿ ರೂಪಾಯಿ ಹಾನಿ ತುಂಬಿಕೊಡಲು ಯತ್ನಾಳ್‌ಗೆ ಆದೇಶಿಸಬೇಕು ಎಂದು ಕೋರಿದ್ದಾರೆ. ಈ ಪ್ರಕರಣವನ್ನು ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಯತ್ನಾಳ್‌ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!