ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ 
ರಾಜ್ಯ

ಚುನಾವಣಾ ವೆಚ್ಚವಾಗಿ ಅಭ್ಯರ್ಥಿಗಳು 95 ಲಕ್ಷ ರೂಪಾಯಿ ಖರ್ಚು ಮಾಡಬಹುದು: ಬಿಬಿಎಂಪಿ ಮುಖ್ಯ ಆಯುಕ್ತ ಗಿರಿನಾಥ್

ಚುನಾವಣಾ ವೆಚ್ಚವಾಗಿ ಅಭ್ಯರ್ಥಿಗಳು 95 ಲಕ್ಷ ರೂಪಾಯಿ ಖರ್ಚು ಮಾಡಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಹೇಳಿದರು.

ಬೆಂಗಳೂರು: ಚುನಾವಣಾ ವೆಚ್ಚವಾಗಿ ಅಭ್ಯರ್ಥಿಗಳು 95 ಲಕ್ಷ ರೂಪಾಯಿ ಖರ್ಚು ಮಾಡಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಹೇಳಿದರು.

ಶನಿವಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹತ್ತಿರ ಬಂದಿದ್ದು ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ಬರುವ ಮಾಹಿತಿಗಳ ಬಗ್ಗೆ ರಾಜಕೀಯ ಪ್ರತಿನಿಧಿಗಳಿಗೆ ನಿಯಮಿತವಾಗಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸುವ ಒಂದು ದಿನ ಮೊದಲು ಚುನಾವಣಾ ವೆಚ್ಚಕ್ಕಾಗಿ ಪ್ರತ್ಯೇಕ ಬ್ಯಾಂಕ್ ಖಾತೆ ತೆರೆದು ನಿರ್ವಹಣೆ ಮಾಡಬೇಕು. ಚುನಾವಣಾಧಿಕಾರಿಗಳಿಗೂ ಮಾಹಿತಿ ನೀಡಬೇಕು. ಅಭ್ಯರ್ಥಿಗಳು ಚುನಾವಣಾ ವೆಚ್ಚವಾಗಿ 95 ಲಕ್ಷ ರೂ. ಖರ್ಚು ಮಾಡಬಹುದು ಎಂದು ಹೇಳಿದರು.

ಅಭ್ಯರ್ಥಿಯು ನಾಮಪತ್ರ ಸಲ್ಲಿಸುವ ಮೊದಲು ಮಾಡುವ ವೆಚ್ಚವನ್ನು ಪಕ್ಷಗಳ ವೆಚ್ಚವೆಂದು ಪರಿಗಣಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಯಿಂದ ಮತ ಎಣಿಕೆ ದಿನಾಂಕದವರೆಗೆ ತಗಲುವ ವೆಚ್ಚವನ್ನು ಅಭ್ಯರ್ಥಿಯ ವೆಚ್ಚವೆಂದು ಪರಿಗಣಿಸಲಾಗುವುದು.

ಚುನಾವಣಾ ಕಚೇರಿಗಳಿಂದ ದೈನಂದಿನ ನೋಂದಣಿ, ರಿಜಿಸ್ಟರ್ ಮತ್ತು ಬ್ಯಾಂಕ್ ರಿಜಿಸ್ಟರ್ ಸೇರಿದಂತೆ ಮೂರು ನಮೂನೆಗಳಲ್ಲಿ ವಿವರಗಳನ್ನು ನೀಡಲು ಅಭ್ಯರ್ಥಿಗಳಿಗೆ ತಿಳಿಸಲಾಗಿದ್ದು, ಚುನಾವಣಾ ವೆಚ್ಚದ ಲೆಕ್ಕಾಚಾರವನ್ನು ಈ ರಿಜಿಸ್ಟರ್‌ಗಳಲ್ಲಿ ನಮೂದಿಸಬೇಕಾಗದುತ್ತದೆ. ಪ್ರತಿ ಖರ್ಚಿಗೆ ಸಂಬಂಧಿಸಿದ ವೋಚರ್‌ಗಳು, ಬಿಲ್‌ಗಳು ಮತ್ತು ಇತರ ದಾಖಲೆಗಳನ್ನು ನಿರ್ವಹಿಸಬೇಕು. ತಾರಾ ಪ್ರಚಾರಕರೊಂದಿಗೆ ನಡೆಸುವ ಪ್ರಚಾರ ಸಭೆಗಳು ಮತ್ತು ಅಭ್ಯರ್ಥಿಯ ಪರವಾಗಿ ನಡೆಯುವ ಪ್ರಚಾರಗಳಲ್ಲಿ ಅಭ್ಯರ್ಥಿ ವೇದಿಕೆ ಹಂಚಿಕೊಂಡರೆ ಸಂಪೂರ್ಣ ವೆಚ್ಚವನ್ನು ಅಭ್ಯರ್ಥಿಯ ವೆಚ್ಚವೆಂದೇ ಪರಿಗಣಿಸಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!