ಎಂಬಿ ಪಾಟೀಲ್ 
ರಾಜ್ಯ

ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್‌ಗೆ ಪೂರ್ಣ: ಎಂಬಿ ಪಾಟೀಲ್

ಬಿಎಸ್‌ಆರ್‌ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು...

ಬೆಂಗಳೂರು: ಬಿಎಸ್‌ಆರ್‌ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ ಉದ್ದದ ಗರ್ಡರ್ ಬಳಸಲಾಗುತ್ತಿದೆ ಎಂದು ಸಚಿವ ಎಂಬಿ ಪಾಟೀಲ್‌ ಅವರು ಶನಿವಾರ ಹೇಳಿದರು.

ದೇಶದಲ್ಲೇ ಅತಿ ಉದ್ದದ (100 ಅಡಿ ಅಥವಾ 31 ಮೀಟರ್) ಯು-ಗರ್ಡರ್ ನಿರ್ಮಾಣ ಪ್ರಕ್ರಿಯೆಯನ್ನು ವೀಕ್ಷಿಸಲು ದೇವನಹಳ್ಳಿ ಬಳಿಯ ಗೊಲ್ಲಹಳ್ಳಿಯ ಕ್ಯಾಸ್ಟಿಂಗ್ ಕಾರ್ಯಾಗಾರಕ್ಕೆ ಭೇಟಿ ನೀಡಿದ ಅವರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಎಂಜಿನಿಯರಿಂಗ್ ಅದ್ಭುತ ಈ ಎನ್ನಲಾಗಿರುವ ಈ 100 ಅಡಿ ಉದ್ದದ ಯು-ಗರ್ಡರ್ ಅನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಉಪನಗರ ರೈಲು ಯೋಜನೆಗೆ ಬಳಸಲಾಗುತ್ತಿದೆ. ಮಲ್ಲಿಗೆ ಕಾರಿಡಾರ್ ನ (ನಂಬರ್ 2) ಭಾಗವಾದ ಹೆಬ್ಬಾಳ- ಯಶವಂತಪುರದ 8 ಕಿಮೀ ನಡುವೆ ಇಂತಹ ಸುಮಾರು 450 ಯು-ಗರ್ಡರ್ ಗಳನ್ನು ಬಳಸಲಾಗುತ್ತದೆ. ಇದಕ್ಕೆ ಮುಂಚೆ, ದೇಶದಲ್ಲಿ ಬೇರೆ ರೈಲ್ವೆ ಯೋಜನೆಗಳಲ್ಲಿ 28 ಮೀ. ಉದ್ದದ ಯು- ಗರ್ಡರ್ ಗಳನ್ನು ಬಳಸಲಾಗುತ್ತಿತ್ತು ಎಂದು ಹೇಳಿದರು.

ಈ ಎಲ್‌ಆಂಡ್‌ಟಿ ಕ್ಯಾಸ್ಟಿಂಗ್ ಯಾರ್ಡ್‌ನಲ್ಲಿ ಐ-ಗರ್ಡರ್ ಮತ್ತು ಫೈಯರ್ ಕ್ಯಾಪ್‌ಗಳನ್ನು ಕೂಡ ಕ್ಯಾಸ್ಟಿಂಗ್ ಮಾಡಲಾಗುತ್ತದೆ. ಮೇಲಿನ ಮಾರ್ಗದಲ್ಲಿ ಇಂತಹ 323 ಐ-ಗರ್ಡರ್, 283 ಫೈಯರ್ ಕ್ಯಾಪ್ ಗಳನ್ನು ಬಳಸಲಾಗುತ್ತದೆ. ಉಪನಗರ ರೈಲು ಯೋಜನೆಗೆ ಸಂಬಂಧಿಸಿದಂತೆ ಈವರೆಗೆ ಶೇಕಡ 20ರಷ್ಟು ಕಾಯಂ ಕಾಮಗಾರಿಗಳು ಮುಗಿದಿವೆ. ಕಾರಿಡಾರ್ -2ರಲ್ಲಿ (ಚಿಕ್ಕಬಾಣಾವರ-ಬೆನ್ನಿಗಾನಹಳ್ಳಿ) ಅಗತ್ಯವಿರುವ 120.44 ಎಕರೆ ಭೂಮಿಯ ಪೈಕಿ 119.18 ಎಕರೆ ಜಮೀನು (ಶೇಕಡ 98.5 ರಷ್ಟು) ಈಗಾಗಲೇ ಸ್ವಾಧೀನಗೊಂಡಿದೆ” ಎಂದು ತಿಳಿಸಿದರು.

ಕಾರಿಡಾರ್ – 2ರಲ್ಲಿ ಉತ್ತಮವಾಗಿ ಕೆಲಸ ನಡೆಯುತ್ತಿದೆ. ನಾಗರಿಕ ಸೇವೆಗಳನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಸ್ಎನ್ಎಲ್ ಹಾಗೂ ಇನ್ನಿತರ ಖಾಸಗಿ ಸಂಸ್ಥೆಗಳ ಜೊತೆ ಮಾತುಕತೆ ನಡೆಯುತ್ತಿದೆ. ಕೆಂಗೇರಿ- ವೈಟ್ ಫೀಲ್ಡ್ ಕಾರಿಡಾರನಲ್ಲಿ ಕೆಂಗೇರಿ- ಕಂಟೋನ್ಮೆಂಟ್ ನಡುವೆ ಉಪನಗರ ಯೋಜನೆ ಜಾರಿಗೆ ಯಾವ ಆತಂಕವೂ ಇಲ್ಲ. ಆದರೆ, ಟ್- ವೈಟ್ ಫೀಲ್ಡ್ ನಡುವೆ ಜಾಗದ ಸಮಸ್ಯೆ ಇದ್ದು, ಇಲ್ಲಿ ಎತ್ತರಿಸಿದ ಮಾರ್ಗ ನಿರ್ಮಿಸಬೇಕೆ ಅಥವಾ ಬೇರೆ ಯಾವ ರೀತಿಯಲ್ಲಿ ಯೋಜನೆ ಅನುಷ್ಠಾನ ಮಾಡಬಹುದು ಎಂಬುದರ ಬಗ್ಗೆ ರೈಲ್ವೆ ಜತೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು,

ಒಟ್ಟಾರೆ, ರೂ 15,677 ಕೋಟಿಯ ಯೋಜನೆಯ ನಾಲ್ಕೂ ಕಾರಿಡಾರ್ ಗಳ 148.17 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಮಗಾರಿ ಡಿಸೆಂಬರ್ 2027ಕ್ಕೆ ಮುಗಿಯಲಿದೆ. ಈ ಗುರಿಗೆ ಪೂರಕವಾಗಿ ರೈಲ್ವೆ ಇಲಾಖೆಯು ಸಿ-1 ಮತ್ತು ಸಿ- 3 ಕಾರಿಡಾರ್ ಗಳ ಕಾಮಗಾರಿಗಾಗಿ ಒತ್ತುವರಿ ತೆರವುಗೊಳಿಸಿದ ಭೂಮಿಯನ್ನು ನಮಗೆ ಹಸ್ತಾಂತರಿಸಬೇಕು ಹಾಗೂ ಡಿಪಿಆರ್ ನಲ್ಲಿ ಇರುವಂತೆ ಅಲೈನ್ಮೆಂಟಿಗೆ ಅನುಮತಿ ನೀಡಬೇಕು ದು ಕೋರಿದರು.

ರೈಲ್ವೆ ಇಲಾಖೆಯು ಮುಂಬರುವ ವರ್ಷಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವರ್ತುಲ ರೈಲ್ವೆ ಯೋಜನೆಗೆ ಉಪನಗರ ರೈಲು ಯೋಜನೆಯನ್ನು ಸಂಪರ್ಕಿಸುವ ಜೊತೆಗೆ ಅದನ್ನು ಬೆಂಗಳೂರು ಸುತ್ತಲ ಉಪನಗರಗಳಿಗೆ ವಿಸ್ತರಿಸುವ ಬಗ್ಗೆಯೂ ಕೆ-ರೈಡ್ ಈಗಾಗಲೇ ಚಿಂತನೆ ನಡೆಸುತ್ತಿದೆ. ಇದರ ಬಗ್ಗೆ ರೈಲ್ವೆ ಇಲಾಖೆ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ರೈಲ್ವೆ ಇಲಾಖೆಯು ಮುಂಬರುವ ವರ್ಷಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವರ್ತುಲ ರೈಲ್ವೆ ಯೋಜನೆಗೆ ಉಪನಗರ ರೈಲು ಯೋಜನೆಯನ್ನು ಸಂಪರ್ಕಿಸುವ ಜೊತೆಗೆ ಅದನ್ನು ಬೆಂಗಳೂರು ಸುತ್ತಲ ಉಪನಗರಗಳಿಗೆ ವಿಸ್ತರಿಸುವ ಬಗ್ಗೆಯೂ ಕೆ-ರೈಡ್ ಈಗಾಗಲೇ ಚಿಂತನೆ ನಡೆಸುತ್ತಿದೆ. ಇದರ ಬಗ್ಗೆ ರೈಲ್ವೆ ಇಲಾಖೆ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ- ರೈಡ್ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್.ಮಂಜುಳಾ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT