ಮೊಬೈಲ್‌ ಅಂಗಡಿ ಮಾಲೀಕನ ಮೇಲೆ ಹಲ್ಲೆ
ಮೊಬೈಲ್‌ ಅಂಗಡಿ ಮಾಲೀಕನ ಮೇಲೆ ಹಲ್ಲೆ 
ರಾಜ್ಯ

ನಮಾಜ್‌ ವೇಳೆ ಹನುಮಾನ್‌ ಚಾಲೀಸ ಹಾಕಿದ ಆರೋಪ: ಮೊಬೈಲ್‌ ಅಂಗಡಿ ಮಾಲೀಕನಿಗೆ ಯುವಕರಿಂದ ಥಳಿತ, ಆರ್ ಅಶೋಕ್ ಕಿಡಿ

Srinivasamurthy VN

ಬೆಂಗಳೂರು: ನಮಾಜ್‌ ಮಾಡುವ ಸಮಯದಲ್ಲಿ ಹನುಮಾನ್‌ ಚಾಲೀಸ್‌ ಹಾಕಿದ ಎಂದು ಆರೋಪಿಸಿ ಮೊಬೈಲ್‌ ಅಂಗಡಿ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಲಸೂರು ಗೇಟ್‌ ಠಾಣೆ ವ್ಯಾಪ್ತಿಯಲ್ಲಿರುವ ನಗರತ್‌ಪೇಟೆಯಲ್ಲಿ ಈ ಘಟನೆ ಸಂಭವಿಸಿದ್ದು, ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಐದಾರು ಮುಸ್ಲಿಂ ಯುವಕರಿಂದ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ನಗರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇದೇ ಸ್ಥಳದಲ್ಲಿ ಸಂತ್ರಸ್ಥ ಮುಖೇಶ್‌ ಮೊಬೈಲ್‌ ಸರ್ವೀಸ್‌ ಅಂಗಡಿ ಹೊಂದಿದ್ದಾನೆ. ಭಾನುವಾರ ಸಂಜೆ ಅಂಗಡಿಯಲ್ಲಿ ಹನುಮಾನ್‌ ಚಾಲೀಸ್‌ ಹಾಕಿದ್ದು, ಜೋರು ಶಬ್ಧ ಕೊಟ್ಟಿದ್ದ ಎಂದು ಹಲ್ಲೆ ಮಾಡಿದ ಯುವಕರು ಆರೋಪಿಸಿದ್ದಾರೆ.

ಅದೇ ವೇಳೆ ಅನ್ಯಕೋವಿನ ಯುವಕರು ನಮಾಜ್‌ ಮಾಡುತ್ತಿದ್ದರು ಎನ್ನಲಾಗಿದ್ದು, ನಮಾಜ್‌ ಮಾಡುವಾಗ ಜೋರು ಶಬ್ಧ ಕೇಳಿದ್ದರಿಂದ ಆಕ್ರೋಶಗೊಂಡ ಐವರು ಯುವಕರು, ಮುಖೇಶ್‌ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಬಳಿಕ ಮುಖೇಶ್ ನನ್ನು ಅಂಗಡಿಯಿಂದ ಹೊರ ಎಳೆದು ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಅದರಿಂದ ಮುಖೇಶ್‌ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ 5 ಯುವಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಹಲಸೂರುಗೇಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖೇಶ್‌ ಹಲ್ಲೆಗೊಳಗಾದ ಯುವಕ. ಘಟನೆ ಸಂಬಂಧ ಐವರು ಅನ್ಯ ಕೋಮಿನ ಯುವಕ ರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳನ್ನು ಬಂಧಿಸದಿದ್ದರೆ ಚಿಕ್ಕಪೇಟೆ ಬಂದ್; ವರ್ತರಿಂದ ಎಚ್ಚರಿಕೆ

ಇನ್ನು ಈ ಪ್ರದೇಶದಲ್ಲಿ ಈ ಘಟನೆ ಇದೇ ಮೊದಲೇನಲ್ಲ.. ಕಳೆದ 15 ದಿನಗಳಿಂದ ಅಂಗಡಿ ಮುಂದೆ ಬಂದು ಕಿರುಕುಳ ಕೊಡುತ್ತಿದ್ದ ಪುಂಡರು ಇಂದು ಏಕಾಏಕಿ ಕಿರಿಕ್ ತೆಗೆದು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದವರ ಬಂಧಿಸುವಂತೆ‌ ಒತ್ತಾಯಿಸಿ ಹಲಸೂರು ಗೇಟ್ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ವರ್ತಕರು. ಆರೋಪಿಗಳನ್ನು ಬಂಧಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ. ನಾಳೆ ಸಂಜೆಯೊಳಗೆ ಹಲ್ಲೆ ಮಾಡಿದ ಪುಂಡರ ಬಂಧನವಾಗಬೇಕು. ಬಂಧಿಸದಿದ್ರೆ ಸಂಪೂರ್ಣ ‌ಚಿಕ್ಕಪೇಟೆ ಬಂದ್ ಮಾಡುವ ಎಚ್ಚರಿಕೆ ನೀಡಿದ ವರ್ತಕರು.

ಬಿಗಿ ಭದ್ರತೆ

ಜನರು ಹೆಚ್ಚು ಜಮಾಯಿಸಿದ ಹಿನ್ನೆಲೆ ಪೊಲೀಸ್ ಠಾಣೆ ಮುಂದೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇಬ್ಬರು ಎಸಿಪಿ, ಒಂದು ಕೆಸಿಆರ್‌ಪಿ ತುಕಡಿ, ಮೂವರು ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದು ತಿಳಿದುಬಂದಿದೆ.

ವಿಡಿಯೋ ಹಾಕಿ ಕಿಡಿಕಾರಿದ ವಿಪಕ್ಷ ನಾಯಕ ಆರ್ ಅಶೋಕ್

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು-ಸುವ್ಯವಸ್ಥೆ ಕುರಿತು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದು, ಹಲ್ಲೆಯ ಸಿಸಿಟಿವಿ ವಿಡಿಯೋವನ್ನು ಟ್ವಿಟರ್ ನಲ್ಲಿ ಹಾಕಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

'ಕರ್ನಾಟಕದಲ್ಲಿ ಹನುಮಾನ್ ಚಲೀಸಾ ನಿಷೇಧ ಮಾಡಲಾಗಿದೆಯೇ ಸಿಎಂ ಸಿದ್ದರಾಮಯ್ಯ ನವರೇ? ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ, ಮಿತಿಮೀರಿದ ಓಲೈಕೆಯಿಂದ ಮೂಲಭೂತವಾದಿ ಮುಸ್ಲಿಮರಿಗೆ ನಾವು ಏನು ಮಾಡಿದರೂ ನಡೆಯುತ್ತೆ ಎನ್ನುವ ಮೊಂಡು ಧೈರ್ಯ ಬಂದಿದ್ದು, ಬೆಂಗಳೂರಿನ ಶಿವಾಜಿನಗರದ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಂ ಯುವಕರ ಗುಂಪೊಂದು ಹಿಂದೂಗಳ ಮೇಲೆ ಹಲ್ಲೆ ನಡೆಸಿದೆ. ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಅನ್ನುವುದೇ ಇಲ್ಲದಂತಾಗಿದ್ದು, ಜನಸಾಮಾನ್ಯರು ರಕ್ಷಣೆ ಇಲ್ಲದೆ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

SCROLL FOR NEXT