ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 
ರಾಜ್ಯ

HDK ಗೆ ತಮ್ಮ ತಪ್ಪಿನ ಅರಿವಾಗುತ್ತಿದೆ; BJP ಯಿಂದ JDS ಮುಗಿಸುವ ಕೆಲಸ: ದಿನೇಶ್ ಗುಂಡೂರಾವ್

ಬಿಜೆಪಿ ಜೊತೆ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಅಸಮಾಧಾನ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.

ಬೆಂಗಳೂರು: ಬಿಜೆಪಿ ಜೊತೆ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಅಸಮಾಧಾನ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಯು ಜೆಡಿಎಸ್ ಮುಗಿಸುವ ಕೆಲಸ ಮಾಡುತ್ತಿದೆ. ಈಗ ಬಿಜೆಪಿಯವರ ಕೈಯಲ್ಲಿ ಜೆಡಿಎಸ್ ನವರು ಸಿಕ್ಕಿಹಾಕಿಕೊಂಡಿದ್ದಾರೆ. ಹೊರಗೆ ಬರುವುದು ಕೂಡ ಈಗ ಜೆಡಿಎಸ್ ಗೆ ಕಷ್ಟವಾಗಿದೆ. ಜೆಡಿಎಸ್ ನವರು ಮಾತ್ರ ದೆಹಲಿಗೆ ಹೋಗಬೇಕು ಆದರೆ ಮೋದಿ ಬಂದಾಗ ವೇದಿಕೆಗೆ ಕುಮಾರಸ್ವಾಮಿ ಅವರನ್ನು ಕರೆಯಲ್ಲ. ಕುಮಾರಸ್ವಾಮಿಗೆ ಈಗ ತಮ್ಮ ತಪ್ಪು ಅರಿವಾಗುತ್ತಿರುಬಹುದು ಆದ್ರೆ ಬಹಳ ತಡವಾಗಿಬಟ್ಟಿದೆ ಎಂದು ದಿನೇಶ್ ಗುಂಡೂರಾವ್ ಟಾಂಗ್ ಕೊಟ್ಟರು.

ಇನ್ನೂ ನಗರ್ತಪೇಟೆ ಗಲಾಟೆಗೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಈ ಆರೋಪಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿರುಗೇಟು ನೀಡಿದ್ದಾರೆ. ತೇಜಸ್ವಿ ಸೂರ್ಯ ಎಂದಿನಂತೆ ದ್ವೇಷ ಹರಡಲು ಪ್ರಯತ್ನಿಸುತ್ತಿದ್ದಾರೆ. ಹಿಂದೂ ಮತ್ತು ಮುಸ್ಲಿ ಹುಡುಗರು ಒಟ್ಟಾಗಿ ಹಲ್ಲೆ ನಡೆಸಿದ್ದಾರೆ.

ಆಜಾನ್ ವಿಚಾರವಾಗಿಯೇ ಹಲ್ಲೆ ನಡೆದಿದ್ದರೆ, ಹಿಂದೂ ಅಂಗಡಿಯವನ ಮೇಲೆ ಹಿಂದೂಗಳು ಏಕೆ ದಾಳಿ ಮಾಡುತ್ತಾರೆ..? ಇನ್ನು ಹನುಮಾನ್ ಚಾಲೀಸಾ ಹಾಕಲಾಗಿತ್ತು ಎಂದು ಯಾರು ಹೇಳಿದರು? ಇದು ಆಜಾನ್ Vs ಭಜನೆ ಜಗಳ ಎಂಬ ತೀರ್ಮಾನಕ್ಕೆ ಹೇಗೆ ಬರುತ್ತೀರಿ..? ಪ್ರಕರಣ ಏನೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಆದರೆ ಬಿಜೆಪಿಯ ಈ ಯುವ ನಾಯಕ ಕೆಳಮಟ್ಟದ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT