ಸಾಂದರ್ಭಿಕ ಚಿತ್ರ 
ರಾಜ್ಯ

ಅನೈತಿಕ ಸಂಬಂಧ ಶಂಕೆ: ವಿಜಯಪುರದ ನಿಡಗುಂದಿ ಗ್ರಾಮದಲ್ಲಿ ಜೋಡಿ ಕೊಲೆ

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆಯನ್ನು ಕೊಲೆ ಮಾಡಲಾಗಿದೆ.

ವಿಜಯಪುರ: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಅವರಿಬ್ಬರೂ ಬೇರೆ ಬೇರೆಯವರಾಗಿದ್ದು, ಜತೆಯಾಗಿದ್ದಾಗ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಹಾಗಾಗಿ ಇದು ಅಕ್ರಮ‌ ಸಂಬಂಧದ ಸಂಶಯದ ಹಿನ್ನೆಲೆಯಲ್ಲಿ ನಡೆದಿರುವ ಜೋಡಿ ಕೊಲೆ ಆಗಿರಬಹುದು ಎಂದು ಸಂಶಯಿಸಲಾಗಿದೆ. ಸೋಮವಾರ ರಾತ್ರಿ ನಿಡಗುಂದಿ ತಾಲ್ಲೂಕಿನ ಮಾರಡಗಿ ತಾಂಡಾದ ಸಮೀಪ ನಡೆದಿದೆ.

ಮೃತರು ಗಣಿ ಗ್ರಾಮದ ಸೋಮನಿಂಗಪ್ಪ ಕಲ್ಲಪ್ಪ ಕುಂಬಾರ (35) ಹಾಗೂ ಪಾರ್ವತಿ ತಳವಾರ (38) ಎಂದು ಗುರುತಿಸಲಾಗಿದೆ. ಗಣಿ ಗ್ರಾಮಕ್ಕೆ ಬರುವ ಮೊದಲೇ ಇಬ್ಬರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಯಾರೂ ಮಾಡಿದರು? ಕೊಲೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಮಂಗಳವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು ಸ್ಥಳಕ್ಕೆ ನಿಡಗುಂದಿ ಪೊಲೀಸರು ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ