ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟು

ವಿಚಾರಣೆ ವೇಳೆ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ಮಾಡಲು ಮುಂದಾದ ರೌಡಿ ಶೀಟರ್ ಕಾಲಿಗೆ ಕಗ್ಗಲೀಪುರ ಠಾಣೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶನಿವಾರ ನಡೆದಿದೆ.

ರಾಮನಗರ: ವಿಚಾರಣೆ ವೇಳೆ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ಮಾಡಲು ಮುಂದಾದ ರೌಡಿ ಶೀಟರ್ ಕಾಲಿಗೆ ಕಗ್ಗಲೀಪುರ ಠಾಣೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶನಿವಾರ ನಡೆದಿದೆ.

ಕೊಲೆ ಆರೋಪಿ ರೌಡಿ ಶೀಟರ್ ಕಾಲಿಗೆ ಗುಂಡೇಟುಬೆಂಗಳೂರಿನ ಜೆಪಿ ನಗರ ನಿವಾಸಿ ಸೋಮೇಶ (50) ಪೊಲೀಸರಿಂದ ಗುಂಡೇಟು ತಿಂದ ರೌಡಿ ಶೀಟರ್.

2023ರ ಡಿಸೆಂಬರ್ 5ರಂದು ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಗ್ಗಲೀಪುರ ಕೆರೆಯ ಏರಿ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದ ಪೊಲೀಸರು ರೌಡಿ ಶೀಟರ್ ಸೋಮೇಶ ಅಲಿಯಾಸ್ ಸೋಮನನ್ನು ವಶಕ್ಕೆ ಪಡೆದು ಘಟನೆ ನಡೆದ ಸ್ಥಳಕ್ಕೆ ಸ್ಥಳ ಮಹಜರಿಗೆ ಶನಿವಾರ ಕರೆದುಕೊಂಡು ಹೋಗಿದ್ದರು.

ಈ ವೇಳೆ ಆನೇಕಲ್ ರಸ್ತೆಯ ಮುಳುಕ ಮಲೆ ಎನ್ನುವಲ್ಲಿ ಆರೋಪಿ, ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪ್ರಾಣ ರಕ್ಷಣೆ ಹಿನ್ನೆಲೆಯಲ್ಲಿ ಪಿಐ ಸುಂದರ್ ಅವರು ಆರೋಪಿ ಎಡಗಾಲಿಗೆ ಗುಂಡು ಹಾರಿಸಿದ್ದಾರೆ.

ತಕ್ಷಣ ಗಾಯಾಳು ಆರೋಪಿಯನ್ನು ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಬಂಧಿತ ಆರೋಪಿ ಸೋಮನ ವಿರುದ್ಧ ಒಟ್ಟು ಜೆಪಿ. ನಗರ, ಮಡಿವಾಳ, ಮೈಕೋಲೇಔಟ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕೊಲೆ ಸೇರಿದಂತೆ ವಿವಿಧ 15 ಪ್ರಕರಣಗಳು ದಾಖಲಾಗಿವೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ದಿನಕರ್ ಶೆಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿ ಹೋಟೆಲ್ ಉದ್ಯಮಿಯಾಗಿದ್ದು, ಇತರೆ ನಾಲ್ಕು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಕಳೆದ ವರ್ಷ ಡಿಸೆಂಬರ್ 5 ರಂದು ತನ್ನ ಸ್ನೇಹಿತ ಅಯ್ಯಪ್ಪನ್ ಚಿಲ್ಲದುರೈ ತೇವರ್ ಎಂಬ ವ್ಯಕ್ತಿಯನ್ನು ಹತ್ಯೆ ಮಾಡಿದ್ದ. ಅಯ್ಯಪ್ಪನ್ ಆರೋಪಿಯಿಂದ ಹೋಟೆಲ್ ಉದ್ಯಮಕ್ಕಾಗಿ ಹಣ ಪಡೆದಿದ್ದ. ಆದರೆ, ವ್ಯವಹಾರದಲ್ಲಿ ನಷ್ಟ ಎದುರಾದ ಹಿನ್ನೆಲೆಯಲ್ಲಿ ಹಣ ಹಿಂತಿರುಗಿಸಿರಲಿಲ್ಲ. ಹಣ ಹಿಂತಿರುಗಿಸದಿದ್ದರೂ ಮತ್ತೆ ಉದ್ಯಮ ಆರಂಭ ಆರಂಭಿಸಲು ಆರೋಪಿ ಬಳಿ ಹಣ ಕೇಳಿದ್ದಾನೆ. ಇದರಿಂದ ಕೆಂಡಾಮಂಡಲಗೊಂಡಿರುವ ಆರೋಪಿ ಅಯಪ್ಪನ್ ಅವರ ಗುತ್ತಿಗೆಗೆ ಕೇಬಲ್ ವೈಯರ್ ಬಿಗಿದು ಹತ್ಯೆ ಮಾಡಿದ್ದ. ನಂತರ ಮೃತದೇಹವನ್ನು ಕಗ್ಗಲಿಪುರದ ಬಳಿ ಎಸೆದು ಪರಾರಿಯಾಗಿದ್ದ. ಹುಬ್ಬಳ್ಳಿ ಕಡೆಗೆ ಪ್ರಯಾಣ ಬೆಳೆಸಿದ್ದ ಆರೋಪಿ, ಹತ್ಯೆ ವೇಳೆ ಧರಿಸಿದ್ದ ಬಟ್ಟೆಗಳನ್ನು ಸುಟ್ಟು ಹಾಕಿದ್ದ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

ಚಿಕ್ಕಬಳ್ಳಾಪುರ: 'Miss U Chinna' ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

Maria Corina Machado: ನೋಬೆಲ್ ಶಾಂತಿ ಪ್ರಶಸ್ತಿ ಗೆದ್ದ ಮರಿಯಾ ಕೊರಿನಾ ಮಚಾದೊ ಕುರಿತು ಆಸಕ್ತಿಕರ ಮಾಹಿತಿ ಇಲ್ಲಿದೆ!

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

'ಇದೇ ಕೊನೆ, ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಕರ್ನಾಟಕ 3 ಭಾಗ, ಭಾರತ 2 ಭಾಗ'.. 'ಮೋದಿ ದೇಶದ ರಕ್ಷಾ ಕವಚ': "ಬ್ರಹ್ಮಾಂಡ" ಭವಿಷ್ಯ

SCROLL FOR NEXT