ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ: ಬ್ಲಡ್ ಗ್ರೂಪ್ ಬದಲಾಗಿ ಬಾಣಂತಿ ಸಾವು, ಅವಳಿ ಮಕ್ಕಳು ಅನಾಥ; ಆಸ್ಪತ್ರೆಯ ನಾಲ್ವರು ಸಿಬ್ಬಂದಿ ಅಮಾನತು!

ಹೆರಿಗೆ ವೇಳೆ ಬ್ಲಡ್ ಗ್ರೂಪ್ ಬದಲಾಗಿ ಬಾಣಂತಿ ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ವಿಜಯಪುರ: ಹೆರಿಗೆ ವೇಳೆ ಬ್ಲಡ್ ಗ್ರೂಪ್ ಬದಲಾಗಿ ಬಾಣಂತಿ ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಬಬಲೇಶ್ವರ ತಾಲೂಕಿನ ದದಾಮಟ್ಟಿ ಗ್ರಾಮದ ಶಾರದಾ ದೊಡ್ಡಮನಿ ಅವರು ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ನಂತರ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಶಾರದಾ ದೊಡ್ಡಮನಿ ಅವರಿಗೆ ಬೇರೆ ಗುಂಪಿನ ರಕ್ತ ನೀಡಿದ್ದರಿಂದ ಆಕೆ ಸಾವನ್ನಪ್ಪಿದ್ದರು. ಈ ಘಟನೆಗೆ ಕಾರಣ ಮತ್ತು ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಜಿಲ್ಲಾಸ್ಪತ್ರೆಯ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಹೆರಿಗೆ ವೇಳೆ ಗಂಡು ಹಾಗೂ ಹೆಣ್ಣು ಸೇರಿ ಅವಳಿ ಮಕ್ಕಳಿಗೆ ಶಾರದಾ ಜನ್ಮ ನೀಡಿದ್ದರು. ಶಾರದಾ ಸಾವಿನಿಂದಾಗಿ ಮೂರು ವರ್ಷದ ಮಗು ಹಾಗೂ ಅವಳಿ ಮಕ್ಕಳು ಇದೀಗ ಅನಾಥರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!