ಜ್ಯೋತಿರಾಜ್ 
ರಾಜ್ಯ

ರಾಮನಗರದ ಹಂದಿಗುಂದಿ ಬೆಟ್ಟ ಹತ್ತಿದ 'Monkey Man' ಖ್ಯಾತಿಯ ಜ್ಯೋತಿರಾಜ್ ವಶಕ್ಕೆ!

ಅನುಮತಿ ಪಡೆಯದೆ ರಾಮನಗರದ ಹಂದಿಗುಂದಿ ಬೆಟ್ಟವನ್ನು ಹತ್ತಲು ಯತ್ನಿಸಿದ 'Monkey Man' ಖ್ಯಾತಿಯ ಜ್ಯೋತಿರಾಜ್ ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಾಮನಗರ: ಅನುಮತಿ ಪಡೆಯದೆ ರಾಮನಗರದ ಹಂದಿಗುಂದಿ ಬೆಟ್ಟವನ್ನು ಹತ್ತಲು ಯತ್ನಿಸಿದ 'Monkey Man' ಖ್ಯಾತಿಯ ಜ್ಯೋತಿರಾಜ್ ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಹಂದಿಗುಂದಿ ಬೆಟ್ಟ ಹತ್ತಲು ಅನುಮತಿ ನೀಡುವಂತೆ ಕೆಲ ದಿನಗಳ ಹಿಂದೆ ಜ್ಯೋತಿರಾಜ್ ಅರಣ್ಯ ಇಲಾಖೆಯನ್ನು ಕೋರಿದ್ದರು. ಇದಕ್ಕೆ ಇಲಾಖೆ ಸುರಕ್ಷತೆಯ ದೃಷ್ಟಿಯಿಂದ ಮೊದಲು ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಯ ಅನುಮತಿ ಸಹ ಪಡೆಯುವಂತೆ ಎಂದು ಸಲಹೆ ನೀಡಿತ್ತು. ಇದ್ಯಾವುದನ್ನು ಲೆಕ್ಕಿಸದೆ ಏಕಾಂಗಿಯಾಗಿ ಬೆಟ್ಟ ಹತ್ತಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಅಧಿಕಾರಿಗಳು ಸ್ಥಳಕ್ಕೆ ಬರುವ ವೇಳೆಗೆ ಜ್ಯೋತಿರಾಜ್ 560 ಮೀಟರ್ ಎತ್ತರದ ಹಂದಿಗುಂದಿ ಬೆಟ್ಟವನ್ನು ಮುಕ್ಕಾಲುಭಾಗ ಹತ್ತಿದ್ದರು. ಈ ವೇಳೆ ಅಧಿಕಾರಿಗಳು ಕರೆ ಮಾಡಿ ಇಳಿಯುವಂತೆ ಸೂಚಿಸಿದ್ದಾರೆ. ಇದಕ್ಕೆ ಜ್ಯೋತಿರಾಜ್ ಬೆಟ್ಟವನ್ನು ಸಂಪೂರ್ಣವಾಗಿ ಹತ್ತಿ ಇಳಿಯುವುದಾಗಿ ಹೇಳಿದ್ದಾರೆ.

ಬೆಟ್ಟ ಹತ್ತಿ ಇಳಿದ ನಂತರ ಅಧಿಕಾರಿಗಳು ಮುಚ್ಚಳಿಕೆ ಪತ್ರ ಬರೆಯಿಸಿಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ. ಇನ್ನು ಬೆಟ್ಟ ಹತ್ತುವಾಗ ಮೊಬೈಲ್‌ನಲ್ಲಿ ಜ್ಯೋತಿರಾಜ್ ಸೆರೆ ಹಿಡಿದಿದ್ದ ಫೋಟೋಗಳನ್ನು ಡಿಲೀಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ